ಮನೆಯವರನ್ನು ಕಟ್ಟಿಹಾಕಿ ದರೋಡೆಗೈದ ಮುಸುಕುಧಾರಿಗಳ ತಂಡ

  • ಕಳ್ಳರು, ದರೋಡೆಕೋರರಿದ್ದಾರೆ ಎಚ್ಚರಿಕೆ

ನಾಲ್ವರು ಮುಸುಕುಧಾರಿಗಳ ತಂಡವೊಂದು ಮನೆಗೆ ನುಗ್ಗಿ  ಮನೆಮಂದಿಯನ್ನು ಕಟ್ಟಿಹಾಕಿ ಚಿನ್ನಾಭರಣ ದೋಚಿದ ಘಟನೆ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಬಳಿ ನಡೆದಿದೆ.

ಧರ್ಮಸ್ಥಳ ಗ್ರಾಮದ ನೀರಚಿಲುವೆ ಬಳಿಯ ಅಚ್ಯುತ ಭಟ್ ಎಂಬುವವರ ಮನೆಯಲ್ಲಿ ಘಟನೆ ನಡೆದಿದೆ. ರಾತ್ರಿ ಸುಮಾರು 2.30 ರ ವೇಳೆಗೆ ಮನೆಗೆ ನುಗ್ಗಿದ ಕಳ್ಳರು ಮನೆ ಮಂದಿಯನ್ನು‌ಕಟ್ಟಿ ಹಾಕಿ ಸುಮಾರು 13 ಲಕ್ಷ ನಗದು ಸಹಿತ 40 ಪವನ್ ಚಿನ್ನ ಹಾಗೂ1 ಕೆಜಿ ಬೆಳ್ಳಿಯ ಅಭರಣಗಳನ್ನು ಕಳವುಗೈದಿದ್ದಾರೆ.

ಅಚ್ಯುತ ಭಟ್ ಉಜಿರೆಯಲ್ಲಿ ಅಡಿಕೆ ವ್ಯಾಪಾರ ನಡೆಸುತ್ತಿದ್ದು, ರಾತ್ರಿ ಹೊತ್ತು ನಾಯಿ ಬೊಗಳಿದ ಶಬ್ದ ಕೇಳಿ ಬಾಗಿಲು ತೆರೆದಿದ್ದು ಈ ವೇಳೆ ಮನೆಯೊಳಗೆ ನುಗ್ಗಿದ್ದ ನಾಲ್ವರು ದರೋಡೆಕೋರರ ತಂಡ ಭಟ್ ಸೇರಿದಂತೆ ಮನೆ ಮಂದಿಯನ್ನು ಕಟ್ಟಿ ಹಾಕಿ ದರೋಡೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾರೆ. ಪೊಲೀಸರಿಗೆ ಈ ಬಗ್ಗೆ ಹೇಳಿದ್ರೆ ಜೀವಹಾನಿ ಮಾಡುದಾಗಿ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ಸಂದೇಶ್.ಪಿ.ಜಿ , ಧರ್ಮಸ್ಥಳ ಪಿಎಸ್ಐ ಪವನ್ ನಾಯ್ಕ್ ಮತ್ತು ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಮನೆಯವರನ್ನು ಕಟ್ಟಿಹಾಕಿ ದರೋಡೆಗೈದ ಮುಸುಕುಧಾರಿಗಳ ತಂಡ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*