ನಾಲ್ವರು ಮುಸುಕುಧಾರಿಗಳ ತಂಡವೊಂದು ಮನೆಗೆ ನುಗ್ಗಿ ಮನೆಮಂದಿಯನ್ನು ಕಟ್ಟಿಹಾಕಿ ಚಿನ್ನಾಭರಣ ದೋಚಿದ ಘಟನೆ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಬಳಿ ನಡೆದಿದೆ.
ಧರ್ಮಸ್ಥಳ ಗ್ರಾಮದ ನೀರಚಿಲುವೆ ಬಳಿಯ ಅಚ್ಯುತ ಭಟ್ ಎಂಬುವವರ ಮನೆಯಲ್ಲಿ ಘಟನೆ ನಡೆದಿದೆ. ರಾತ್ರಿ ಸುಮಾರು 2.30 ರ ವೇಳೆಗೆ ಮನೆಗೆ ನುಗ್ಗಿದ ಕಳ್ಳರು ಮನೆ ಮಂದಿಯನ್ನುಕಟ್ಟಿ ಹಾಕಿ ಸುಮಾರು 13 ಲಕ್ಷ ನಗದು ಸಹಿತ 40 ಪವನ್ ಚಿನ್ನ ಹಾಗೂ1 ಕೆಜಿ ಬೆಳ್ಳಿಯ ಅಭರಣಗಳನ್ನು ಕಳವುಗೈದಿದ್ದಾರೆ.
ಅಚ್ಯುತ ಭಟ್ ಉಜಿರೆಯಲ್ಲಿ ಅಡಿಕೆ ವ್ಯಾಪಾರ ನಡೆಸುತ್ತಿದ್ದು, ರಾತ್ರಿ ಹೊತ್ತು ನಾಯಿ ಬೊಗಳಿದ ಶಬ್ದ ಕೇಳಿ ಬಾಗಿಲು ತೆರೆದಿದ್ದು ಈ ವೇಳೆ ಮನೆಯೊಳಗೆ ನುಗ್ಗಿದ್ದ ನಾಲ್ವರು ದರೋಡೆಕೋರರ ತಂಡ ಭಟ್ ಸೇರಿದಂತೆ ಮನೆ ಮಂದಿಯನ್ನು ಕಟ್ಟಿ ಹಾಕಿ ದರೋಡೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾರೆ. ಪೊಲೀಸರಿಗೆ ಈ ಬಗ್ಗೆ ಹೇಳಿದ್ರೆ ಜೀವಹಾನಿ ಮಾಡುದಾಗಿ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ಸಂದೇಶ್.ಪಿ.ಜಿ , ಧರ್ಮಸ್ಥಳ ಪಿಎಸ್ಐ ಪವನ್ ನಾಯ್ಕ್ ಮತ್ತು ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…