ಹಲಸಿನ ಹಣ್ಣನ್ನು ತುಂಡರಿಸುವ ಮೂಲಕ ತುಳು ಸಂಸ್ಕೃತಿಯನ್ನು ಬಿಂಬಿಸುವ ಉಪ್ಪಡ್ ಪಚ್ಚಿಲ್ ಆಯನೊ ಎಂಬ ಕಾರ್ಯಕ್ರಮವನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಉದ್ಘಾಟಿಸಿದರು.
ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀರಾಮ ವಿದ್ಯಾಕೇಂದ್ರದ ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷರಾದ ಚಂದ್ರಶೇಖರ್ ಸಾಲ್ಯಾನ್, ಉಪಾಧ್ಯಕ್ಷರಾದ ನಾರಾಯಣ ಗೌಡ, ಆಡಳಿತ ಮಂಡಳಿ ಸದಸ್ಯರಾದ ಆರ್. ಚೆನ್ನಪ್ಪ ಕೊಟ್ಯಾನ್, ರಾಷ್ಟ್ರಸೇವಿಕಾ ಸಮಿತಿಯ ಪ್ರಾಂತ ಕಾರ್ಯಕಾರಿಣಿ ಸದಸ್ಯೆ ಡಾ. ಕಮಲಾ ಪ್ರಭಾಕರ ಭಟ್, ಶಾಲಾಭಿವೃದ್ದಿ ಸಮಿತಿ ಸದಸ್ಯರಾದ ಜಯರಾಮ ಹಾಗೂ ಪದ್ಮನಾಭ, ಶ್ರೀರಾಮ ವಿದ್ಯಾಕೇಂದ್ರದ ಆಡಳಿತ ಮಂಡಳಿಯ ಸದಸ್ಯೆ ಲಕ್ಷ್ಮೀ ರಘುರಾಜ್ ಹಾಗೂ ಮಲ್ಲಿಕಾ ಶೆಟ್ಟಿ, ಶ್ರೀರಾಮ ವಿದ್ಯಾಕೇಂದ್ರದ ಕೋಶಾಧಿಕಾರಿ ಶಿವಗಿರಿ ಸತೀಶ ಭಟ್, ಮುಖ್ಯ ಶಿಕ್ಷಕರಾದ ರವಿರಾಜ್ ಕಣಂತೂರು ಮತ್ತು ಮಾತೃಭಾರತಿ ಪದಾಧಿಕಾರಿಗಳಾದ ಸೌಮ್ಯ, ಬೇಬಿ, ರಾಜಶ್ರೀ ಹಾಗೂ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.
Be the first to comment on "ಉಪ್ಪಡ್ ಪಚ್ಚಿಲ್ ಆಯನೊ – ಕಲ್ಲಡ್ಕದಲ್ಲಿ ಆಹಾರ ಸಂಸ್ಕೃತಿ ಬಿಂಬಿಸುವ ಕಾರ್ಯಕ್ರಮ"