ವಿಧಾನಸಭೆಯ ಬಂಟ್ವಾಳ ಕ್ಷೇತ್ರದ ಪೆರಾಜೆ, ನೆಟ್ಲಮುಡ್ನೂರು, ಮಂಚಿ, ಮಾಣಿ, ಅನಂತಾಡಿ ಗ್ರಾಮಗಳಲ್ಲಿ ಸುಮಾರು 6.6 ಕೋಟಿ ರೂ ಅನುದಾನದ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನಾ ಕಾರ್ಯವನ್ನು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ನೆರವೇರಿಸಿದರು.
ಮಾಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ 1.53 ಕೋ.ರೂ, ಪೆರಾಜೆ ಗ್ರಾಪಂನಲ್ಲಿ 66 ಲಕ್ಷ ರೂ, ನೆಟ್ಲಮುಡ್ನೂರು ಗ್ರಾಮದಲ್ಲಿ 1.25 ಕೋಟಿ ರೂ, ಮಂಚಿ ಗ್ರಾಮದಲ್ಲಿ 88.5 ಕೋಟಿ ರೂ, ಅನಂತಾಡಿ ಗ್ರಾಮದಲ್ಲಿ 2.24 ಕೋಟಿ ರೂ ಸೇರಿದಂತೆ ಒಟ್ಟು 6.6 ಕೋಟಿ ರೂ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶನಿವಾರ ಚಾಲನೆ ನೀಡಲಾಗಿದೆ.
ದ.ಕ.ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ ಸಹಿತ ಜನಪ್ರತಿನಿಧಿಗಳು, ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರು, ಬಿಜೆಪಿ ಪದಾಧಿಕಾರಿಗಳು, ಎಂಜಿನಿಯರುಗಳು, ಸ್ಥಳೀಯ ಮುಂದಾಳುಗಳು ಈ ವೇಳೆ ಉಪಸ್ಥಿತರಿದ್ದರು.
Be the first to comment on "ಬಂಟ್ವಾಳ ಕ್ಷೇತ್ರದಲ್ಲಿ 6.6 ಕೋಟಿ ರೂ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಚಾಲನೆ"