ಬಂಟ್ವಾಳ ಕ್ಷೇತ್ರದಲ್ಲಿ 6.6 ಕೋಟಿ ರೂ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಜಾಹೀರಾತು

ವಿಧಾನಸಭೆಯ ಬಂಟ್ವಾಳ ಕ್ಷೇತ್ರದ ಪೆರಾಜೆ, ನೆಟ್ಲಮುಡ್ನೂರು, ಮಂಚಿ, ಮಾಣಿ, ಅನಂತಾಡಿ ಗ್ರಾಮಗಳಲ್ಲಿ ಸುಮಾರು 6.6 ಕೋಟಿ ರೂ ಅನುದಾನದ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನಾ ಕಾರ್ಯವನ್ನು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ನೆರವೇರಿಸಿದರು.

ಮಾಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ 1.53 ಕೋ.ರೂ, ಪೆರಾಜೆ ಗ್ರಾಪಂನಲ್ಲಿ 66 ಲಕ್ಷ ರೂ, ನೆಟ್ಲಮುಡ್ನೂರು ಗ್ರಾಮದಲ್ಲಿ 1.25 ಕೋಟಿ ರೂ,  ಮಂಚಿ ಗ್ರಾಮದಲ್ಲಿ 88.5 ಕೋಟಿ ರೂ, ಅನಂತಾಡಿ ಗ್ರಾಮದಲ್ಲಿ 2.24 ಕೋಟಿ ರೂ ಸೇರಿದಂತೆ ಒಟ್ಟು 6.6 ಕೋಟಿ ರೂ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶನಿವಾರ ಚಾಲನೆ ನೀಡಲಾಗಿದೆ.

ದ.ಕ.ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ ಸಹಿತ ಜನಪ್ರತಿನಿಧಿಗಳು, ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರು, ಬಿಜೆಪಿ ಪದಾಧಿಕಾರಿಗಳು, ಎಂಜಿನಿಯರುಗಳು, ಸ್ಥಳೀಯ ಮುಂದಾಳುಗಳು ಈ ವೇಳೆ ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
ಜಾಹೀರಾತು
ಜಾಹೀರಾತು

Be the first to comment on "ಬಂಟ್ವಾಳ ಕ್ಷೇತ್ರದಲ್ಲಿ 6.6 ಕೋಟಿ ರೂ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಚಾಲನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*