ಲಾಕ್ ಡೌನ್ ನಿಂದ ಸಂಕಷ್ಟದ ಪರಿಸ್ಥಿತಿಯಲ್ಲಿ ಜೀವನ ಮಾಡುವ ಯಕ್ಷಗಾನ ಕಲಾವಿದರಿಗೆ ಶನಿವಾರ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಕಚೇರಿಯಲ್ಲಿ ಕಿಟ್ ವಿತರಿಸಿದರು.
ಆರ್ಥಿಕವಾಗಿ ತೀರ ಸಂಕಷ್ಟದಲ್ಲಿರುವ ಕಲಾವಿದರನ್ನು ಗುರುತಿಸಿ ಅವರಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು ಅವರ ಸಹಕಾರ ಹಾಗೂ ಹಿರಿಯ ಕಲಾವಿದ ಆಶೋಕ್ ಶೆಟ್ಟಿ ಸರಪಾಡಿ ನೇತೃತ್ವದಲ್ಲಿ ವಳಚ್ಚಿಲ್ ಖಾದರ್ , ರಂಗೋಲಿ ಸದಾನಂದ ಶೆಟ್ಟಿ, ರಾಮ್ ದಾಸ್ ಬಂಟ್ವಾಳ, ಡಾ.ಬಾಲಚಂದ್ರ ಶೆಟ್ಟಿ, ಖಾದರ್ ಇಕ್ರಾ, ದೇವದಾಸ್ ಶೆಟ್ಟಿ ಬಂಟ್ವಾಳ, ನಟರಾಜ ಕುಟ್ಟಿಕಲ, ಸುಧಾಕರ ಶೆಟ್ಟಿ ಮೊಗರೋಡಿ, ಸುರೇಶ್ ಮೀಯಾರು , ಚರಣ್ ಜುಮಾದಿಗುಡ್ಡೆ ಸಹಕಾರದಿಂದ ನೀಡುವ ದಿನಬಳಕೆಯ ವಸ್ತುಗಳ ಕಿಟ್ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಶಾಸಕರ ಕಚೇರಿಯಲ್ಲಿ ಕಲಾವಿದರಿಗೆ ಸಾಂಕೇತಿಕವಾಗಿ ವಿತರಿಸಿದರು.
ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯ ಕಮಲಾಕ್ಷಿ ಪೂಜಾರಿ, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಉಪಾಧ್ಯಕ್ಷ ರೋನಾಲ್ಡ್ ಡಿಸೋಜಾ ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಯೋಜಕ ಕಲಾವಿದ ಆಶೋಕ್ ಶೆಟ್ಟಿ ಸರಪಾಡಿ ಸ್ವಾಗತಿಸಿ, ವಂದಿಸಿದರು.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)