ಬಂಟ್ವಾಳ

ಸಂಕಷ್ಟದಲ್ಲಿರುವ ಯಕ್ಷಗಾನ ಕಲಾವಿದರಿಗೆ ನೆರವು

ಲಾಕ್ ಡೌನ್ ನಿಂದ ಸಂಕಷ್ಟದ ಪರಿಸ್ಥಿತಿಯಲ್ಲಿ ಜೀವನ ಮಾಡುವ ಯಕ್ಷಗಾನ ಕಲಾವಿದರಿಗೆ ಶನಿವಾರ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಕಚೇರಿಯಲ್ಲಿ ಕಿಟ್ ವಿತರಿಸಿದರು.

ಜಾಹೀರಾತು

ಆರ್ಥಿಕವಾಗಿ ತೀರ ಸಂಕಷ್ಟದಲ್ಲಿರುವ ಕಲಾವಿದರನ್ನು ಗುರುತಿಸಿ ಅವರಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು ಅವರ ಸಹಕಾರ ಹಾಗೂ ಹಿರಿಯ  ಕಲಾವಿದ ಆಶೋಕ್ ಶೆಟ್ಟಿ ಸರಪಾಡಿ ನೇತೃತ್ವದಲ್ಲಿ ವಳಚ್ಚಿಲ್ ಖಾದರ್ , ರಂಗೋಲಿ ಸದಾನಂದ ಶೆಟ್ಟಿ, ರಾಮ್ ದಾಸ್ ಬಂಟ್ವಾಳ, ಡಾ.ಬಾಲಚಂದ್ರ ಶೆಟ್ಟಿ, ಖಾದರ್ ಇಕ್ರಾ, ದೇವದಾಸ್ ಶೆಟ್ಟಿ ಬಂಟ್ವಾಳ, ನಟರಾಜ ಕುಟ್ಟಿಕಲ, ಸುಧಾಕರ ಶೆಟ್ಟಿ ಮೊಗರೋಡಿ, ಸುರೇಶ್ ಮೀಯಾರು , ಚರಣ್ ಜುಮಾದಿಗುಡ್ಡೆ ಸಹಕಾರದಿಂದ ನೀಡುವ ದಿನಬಳಕೆಯ ವಸ್ತುಗಳ ಕಿಟ್ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಶಾಸಕರ ಕಚೇರಿಯಲ್ಲಿ ಕಲಾವಿದರಿಗೆ ಸಾಂಕೇತಿಕವಾಗಿ ವಿತರಿಸಿದರು.

ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯ ಕಮಲಾಕ್ಷಿ ಪೂಜಾರಿ, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಉಪಾಧ್ಯಕ್ಷ ರೋನಾಲ್ಡ್ ಡಿಸೋಜಾ ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಯೋಜಕ ಕಲಾವಿದ ಆಶೋಕ್ ಶೆಟ್ಟಿ ಸರಪಾಡಿ ಸ್ವಾಗತಿಸಿ, ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ