ಭಾನುವಾರ ಬಂಟ್ವಾಳದಲ್ಲಿ ಮಹಿಳೆ ಸಾವನ್ನಪ್ಪಿದ್ದು, ಸುಮಾರು ಎರಡು ತಿಂಗಳು ಕಳೆದ ಬಳಿಕ ಮತ್ತೊಂದು ಸಾವು ಪ್ರಕರಣ ಕೊರೊನಾದಿಂದಾಗಿದೆ.
ಬಿ.ಕಸ್ಬಾ ಗ್ರಾಮದ ಲೊರೆಟ್ಟೊ ಸಮೀಪ ಮಹಿಳೆ ಸಾವನ್ನಪ್ಪಿದ ಘಟನೆ ನಡೆದ ಹಿನ್ನೆಲೆಯಲ್ಲಿ ಮತ್ತೆ ಕೊರೊನಾ ಬಂಟ್ವಾಳ ತಾಲೂಕಿನಲ್ಲೂ ಕಾಣಿಸಿರುವುದು ಖಚಿತವಾಗಿದೆ. ಈಗಾಗಲೇ ಬಂಟ್ವಾಳದಲ್ಲಿ ಮೂವರು ಕೊರೊನಾದಿಂದಾಗಿ ಮೃತಪಟ್ಟಿದ್ದು, ಲೊರೆಟ್ಟೊದ ಮಹಿಳೆ ಸೇರಿ ನಾಲ್ವರು ಸಾವನ್ನಪ್ಪಿದಂತಾಗಿದೆ. ತಾಲೂಕಿನಲ್ಲಿ ಮೃತಪಟ್ಟವರೆಲ್ಲರೂ ಮಹಿಳೆಯರೇ ಆಗಿದ್ದಾರೆ. ಇದರೊಂದಿಗೆ ಇನ್ನಷ್ಟು ಪಾಸಿಟಿವ್ ಕೇಸ್ ಗಳು ಪತ್ತೆಯಾಗುತ್ತಿರುವುದು ಆತಂಕಕಾರಿಯಾಗಿದೆ. ಈಗಾಗಲೇ ಬಾಧಿತ ಮನೆಗಳನ್ನು ಸೀಲ್ ಡೌನ್ ಮಾಡಲಾಗುತ್ತಿದೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…