ಜಾಹೀರಾತು
ಎಸೆಸೆಲ್ಸಿ ಪರೀಕ್ಷೆಗೆ ಮಕ್ಕಳನ್ನು ಸಾಗಿಸುತ್ತಿದ್ದ ರಿಕ್ಷಾವೊಂದು ಪಲ್ಟಿಯಾದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಪಾಣೆಮಂಗಳೂರು ಸಮೀಪದ ಶಂಭೂರು ಚರ್ಚ್ ಬಳಿ ಸೋಮವಾರ ಬೆಳಗ್ಗೆ ನಡೆದಿದೆ.
ಶಂಭೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಗಾಯಗೊಂಡವರಾಗಿದ್ದು, ಈ ಪೈಕಿ ವಿದ್ಯಾರ್ಥಿ ಅಕ್ಷಿತ್ ನನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಜಾಹೀರಾತು
ಘಟನೆಯಲ್ಲಿ ಗಾಯಗೊಂಡಿರುವ ಮೂವರು ವಿದ್ಯಾರ್ಥಿಗಳು ಮೂವರು ವಿದ್ಯಾರ್ಥಿನಿಯರಿಗೆ ಬಿ.ಸಿ.ರೋಡಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಪರೀಕ್ಷಾ ಕೇಂದ್ರಕ್ಕೆ ಕಳುಹಿಸಿಕೊಡಲಾಗಿದೆ. ಶಂಭೂರು ಪ್ರೌಢಶಾಲೆಯ ವಿದ್ಯಾರ್ಥಿಗಳು ಪಾಣೆಮಂಗಳೂರು ಶಾರದಾ ಪ್ರೌಢಶಾಲೆಯ ಪರೀಕ್ಷಾ ಕೇಂದ್ರಕ್ಕೆ ಪರೀಕ್ಷೆ ಬರೆಯಲು ರಿಕ್ಷಾದಲ್ಲಿ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಆಟೊ ಪಲ್ಟಿ, ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹೊರಟ ವಿದ್ಯಾರ್ಥಿಗಳಿಗೆ ಗಾಯ"