ಬಂಟ್ವಾಳ: ಕಂದಾಯ ಇಲಾಖೆಯಲ್ಲಿ 35ವರ್ಷ ಎಂಟು ತಿಂಗಳುಗಳ ಕಾಲ ಕರ್ತವ್ಯ ಸಲ್ಲಿಸಿ ಪ್ರಥಮ ದರ್ಜೆ ಸಹಾಯಕರಾಗಿ ನಿವೃತ್ತಿ ಹೊಂದಿದ ಕೆ. ಸೀತಾರಾಮ ಅವರ ಬೀಳ್ಕೊಡುಗೆ ಸಮಾರಂಭವನ್ನು ಬಂಟ್ವಾಳ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಯಿತು.
ತಹಸೀಲ್ದಾರ್ ರಶ್ಮಿ ಎಸ್.ಆರ್. ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಸ್ಥಾನೀಯ ಉಪತಹಶೀಲ್ದಾರ್ ರಾಧಾಕೃಷ್ಣ, ಚುನಾವಣಾ ಶಿರಸ್ತೇದಾರ್ ರಾಜೇಶ್ ನಾಯ್ಕ್, ಭೂಮಿ ಶಿರಸ್ತೇದಾರ್ ಶ್ರೀಧರ್, ಆಹಾರ ಶಿರಸ್ತೇದಾರ್ ಶ್ರೀನಿವಾಸ, ವಿಟ್ಲಾ ನಾಡ ಕಚೇರಿ ಉಪತಹಶೀಲ್ದಾರ ರವಿಶಂಕರ್ ಉಪಸ್ಥಿತರಿದ್ದರು. ಬಂಟ್ವಾಳ ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು ಸ್ವಾಗತಿಸಿದರು, ಗ್ರಾಮಲೆಕ್ಕಿಗರಾದ ಸ್ವಾತಿ ವಂದಿಸಿದರು. ಪಾಣೆಮಂಗಳೂರು ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಕಾರ್ಯಕ್ರಮ ನಿರೂಪಿಸಿದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…