ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಸ್ವೀಕೃತವಾದ ವರದಿಯಲ್ಲಿ 84 ಮಂದಿಗೆ ಕೋವಿಡ್ 19 ಸೋಂಕು ಇರುವುದು ದೃಢಪಟ್ಟಿದೆ. ಈ ಪೈಕಿ 6 ಶಾರ್ಜಾ ಮತ್ತು 1 ಅಂತಾರಾಜ್ಯದಿಂದ ಆಗಮಿಸಿದವರಾಗಿದ್ದಾರೆ. 28 ಮಂದಿ ಐಎಲ್ ಐ, 11 ಮಂದಿಯ ಸೋಂಕಿನ ಮೂಲ ಗೊತ್ತಾಗಿಲ್ಲ. 38 ಮಂದಿ ಪ್ರೈಮರಿ ಸಂಪರ್ಕದವರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಸಿಂದೂ ರೂಪೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದು ಮೂವರು ದ.ಕ.ಜಿಲ್ಲೆಯಲ್ಲಿ ಸಾವನ್ನಪ್ಪಿದ್ದಾರೆ. ಒಬ್ಬರ ಸ್ಥಿತಿ ಗಂಭೀರವಾಗಿದೆ. ಮಂಗಳೂರು ನಿವಾಸಿ 72 ವರ್ಷದ ಪುರುಷ, ಉತ್ತರ ಕನ್ನಡ ಜಿಲ್ಲೆಯ 31 ವರ್ಷದ ಪುರುಷ, ಹಾಗೂ 76 ವರ್ಷದ ವೃದ್ಧರು ಸಾವನ್ನಪ್ಪಿದ್ದಾರೆ. 57 ವರ್ಷದ ಮಹಿಳೆ ಸ್ಥಿತಿ ಗಂಭೀರವಾಗಿದೆ.
ಜಿಲ್ಲೆಯಲ್ಲಿ ಈವರೆಗೆ 13,873 ಮಂದಿಯ ಕೋವಿಡ್ ಪರೀಕ್ಷೆ ಮಾಡಲಾಗಿದ್ದು, 833 ಮಂದಿಗೆ ಪಾಸಿಟಿವ್ ಬಂದಿದೆ. ಇಂದು 84 ಹೊಸ ಕೇಸ್ ಬಂದಿವೆ. ಇದುವರೆಗೆ 17 ಮಂದಿ ಸಾವನ್ನಪ್ಪಿದ್ದಾರೆ. ಇಂದು ಹೊರಬಂದ ರಿಪೋರ್ಟ್ ನಲ್ಲಿ 145 ಮಂದಿಯ ಸ್ಯಾಂಪಲ್ ವರದಿಗಳು ಬಂದಿದ್ದು, ಇದರಲ್ಲಿ ಪಾಸಿಟಿವ್ ಬಂದವರ ಸಂಖ್ಯೆ ಅಧಿಕವಾಗಿದೆ.