ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅನಗತ್ಯವಾಗಿ ಮನೆಯಿಂದ ಹೊರಹೋಗದೆ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಕ್ಷೇತ್ರದ ಜನತೆಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮನವಿ ಮಾಡಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ರಾಜ್ಯ ಮತ್ತು ಜಿಲ್ಲೆಯ ಲ್ಲಿ ಕೊರೊನಾ ಪ್ರಕರಣಗಳು ಮಿತಿಮೀರಿ ಹರಡುತ್ತಿರುವುದರಿಂದ ಯಾವುದೇ ಕಾರಣಕ್ಕೂ ಅನಗತ್ಯ ವಾಗಿ ತಿರುಗಾಟ ಬೇಡ, ಮಾಸ್ಕ್ ಧರಿಸದೆ ಮನೆಯಿಂದ ಹೊರಹೋಗಬೇಡಿ., ಮನೆಯಲ್ಲಿರುವ ಚಿಕ್ಕ ಮಕ್ಕಳ ಹಾಗೂ ಹಿರಿಯ ನಾಗರಿಕರ ಬಗ್ಗೆ ವಿಶೇಷ ಕಾಳಜಿ ವಹಿಸಿ., ಮಕ್ಕಳು ಹಾಗೂ ಹಿರಿಯ ನಾಗರೀಕರು ತಿರುಗಾಟ ನಡೆಸದಂತೆ ನೋಡಿಕೊಳ್ಳಿ, ಆರೋಗ್ಯದ ಸಮಸ್ಯೆ ಕಂಡಬಂದಲ್ಲಿ ಕೂಡಲೇ ಸರಕಾರಿ ಆಸ್ಪತ್ರೆಗೆ ಬೇಟಿ ನೀಡಿ ಆರೋಗ್ಯ ತಪಾಸಣೆ ಗೆ ಒಳಪಡಿಸಿ, ಅಧಿಕಾರಿಗಳೊಂದಿಗೆ ಸಹಕರಿಸಿ., ನಿಮ್ಮ ನಿಮ್ಮ ಆರೋಗ್ಯ ದ ಬಗ್ಗೆ ಜಾಗೃತೆವಹಿಸಿ ಎಂದು ತಿಳಿಸಿದ್ದಾರೆ.
Be the first to comment on "ಕೊರೊನಾ ಪ್ರಕರಣಗಳ ಹೆಚ್ಚಳ: ನಿಯಮ ಪಾಲಿಸಿ – ರಾಜೇಶ್ ನಾಯ್ಕ್ ಮನವಿ"