ಗ್ರಾಮ ಪಂಚಾಯತ್ ನ ಚುನಾಯಿತ ಪ್ರತಿನಿಧಿಗಳ ಐದು ವರ್ಷದ ಆಡಳಿತಾವಧಿ ಸೋಮವಾರಕ್ಕೆ ಪೂರ್ಣಗೊಂಡಿರುವ ಹಿನ್ನಲೆಯಲ್ಲಿ ಬಂಟ್ವಾಳ ತಾಲೂಕಿನ 57 ಗ್ರಾಮ ಪಂಚಾಯತ್ ಗೆ ನೇಮಕಗೊಂಡ ಆಡಳಿತಾಧಿಕಾರಿಗಳ ಸಭೆಯು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಅಧ್ಯಕ್ಷತೆಯಲ್ಲಿ ನಡೆಯಿತು.
ಬಂಟ್ವಾಳ ತಾಪಂನ ಎಸ್ ಜಿಎಸ್ ವೈ ಸಭಾಂಗಣದಲ್ಲಿ ನಡೆದ ಮಹತ್ವದ ಈ ಸಭೆಯಲ್ಲಿ ಈಗಾಗಲೇ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ ಮತ್ತು ಅನುಷ್ಠಾನಗೊಳ್ಳಬೇಕಾದ ಅಭಿವೃದ್ಧಿ ಕಾರ್ಯಕ್ಕೆ ವೇಗ ನೀಡುವಂತೆ ಶಾಸಕ ರಾಜೇಶ್ ನಾಯ್ಕ್ ಅಧಿಕಾರಿಗಳಿಗೆ ಸೂಚಿಸಿದರು.
ಇದೇ ವೇಳೆ ನರೇಗಾ ಯೋಜನೆಯಲ್ಲಿ ಕಾರ್ಯಗತವಾದ ಮತ್ತು ಆಗಬೇಕಾದ ಕಾಮಗಾರಿಗಳ ಬಗ್ಗೆಯು ಚರ್ಚಿಸಲಾಯಿತು, ಗ್ರಾಮಪಂಚಾಯತ್ ಗೆ ಆಡಳಿತಾಧಿಕಾರಿಯಾಗಿ ನಿಯುಕ್ತರಾಗಿರುವ ಅಧಿಕಾರಿಗಳು ಮುಂದಿನ ದಿನಗಳಲ್ಲಿ ಪ್ರತಿ ಪಂಚಾಯತ್ ಗೆ ಭೇಟಿ ನೀಡಿ ಗ್ರಾಮೀಣ ಭಾಗದ ಜನರ ಸಮಸ್ಯೆಗಳ ಪರಿಹಾರಕ್ಕಾಗಿ ಶ್ರಮಿಸಬೇಕೆಂದು ಸೂಚಿಸಿದರು. ತಾಪಂ ಉಪಾಧ್ಯಕ್ಷ ಅಬ್ಬಾಸ್ ಆಲಿ,ಸ್ಥಾಯಿಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ ವೇದಿಕೆಯಲ್ಲಿದ್ದರು. ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಸ್ವಾಗತಿಸಿ,ವಂದಿಸಿದರು.
Be the first to comment on "ಗ್ರಾಪಂ ಆಡಳಿತಾಧಿಕಾರಿಗಳ ಸಭೆ: ಅಭಿವೃದ್ಧಿ ಕಾರ್ಯಕ್ಕೆ ವೇಗ ನೀಡಲು ಶಾಸಕ ನಾಯ್ಕ್ ಸೂಚನೆ"