ಬಂಟ್ವಾಳ

ಗ್ರಾಪಂ ಆಡಳಿತಾಧಿಕಾರಿಗಳ ಸಭೆ: ಅಭಿವೃದ್ಧಿ ಕಾರ್ಯಕ್ಕೆ ವೇಗ ನೀಡಲು ಶಾಸಕ ನಾಯ್ಕ್ ಸೂಚನೆ

ಗ್ರಾಮ ಪಂಚಾಯತ್ ನ ಚುನಾಯಿತ ಪ್ರತಿನಿಧಿಗಳ ಐದು ವರ್ಷದ ಆಡಳಿತಾವಧಿ ಸೋಮವಾರಕ್ಕೆ ಪೂರ್ಣಗೊಂಡಿರುವ ಹಿನ್ನಲೆಯಲ್ಲಿ ಬಂಟ್ವಾಳ ತಾಲೂಕಿನ 57 ಗ್ರಾಮ ಪಂಚಾಯತ್ ಗೆ ನೇಮಕಗೊಂಡ ಆಡಳಿತಾಧಿಕಾರಿಗಳ ಸಭೆಯು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಅಧ್ಯಕ್ಷತೆಯಲ್ಲಿ ನಡೆಯಿತು.

ಜಾಹೀರಾತು

ಬಂಟ್ವಾಳ ತಾಪಂನ ಎಸ್ ಜಿಎಸ್ ವೈ ಸಭಾಂಗಣದಲ್ಲಿ ನಡೆದ ಮಹತ್ವದ ಈ ಸಭೆಯಲ್ಲಿ ಈಗಾಗಲೇ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ ಮತ್ತು ಅನುಷ್ಠಾನಗೊಳ್ಳಬೇಕಾದ ಅಭಿವೃದ್ಧಿ ಕಾರ್ಯಕ್ಕೆ ವೇಗ ನೀಡುವಂತೆ ಶಾಸಕ ರಾಜೇಶ್ ನಾಯ್ಕ್ ಅಧಿಕಾರಿಗಳಿಗೆ ಸೂಚಿಸಿದರು.

ಜಾಹೀರಾತು

ಇದೇ ವೇಳೆ ನರೇಗಾ ಯೋಜನೆಯಲ್ಲಿ ಕಾರ್ಯಗತವಾದ ಮತ್ತು ಆಗಬೇಕಾದ ಕಾಮಗಾರಿಗಳ  ಬಗ್ಗೆಯು ಚರ್ಚಿಸಲಾಯಿತು, ಗ್ರಾಮಪಂಚಾಯತ್ ಗೆ ಆಡಳಿತಾಧಿಕಾರಿಯಾಗಿ ನಿಯುಕ್ತರಾಗಿರುವ ಅಧಿಕಾರಿಗಳು ಮುಂದಿನ ದಿನಗಳಲ್ಲಿ ಪ್ರತಿ ಪಂಚಾಯತ್ ಗೆ ಭೇಟಿ ನೀಡಿ ಗ್ರಾಮೀಣ ಭಾಗದ ಜನರ ಸಮಸ್ಯೆಗಳ ಪರಿಹಾರಕ್ಕಾಗಿ ಶ್ರಮಿಸಬೇಕೆಂದು ಸೂಚಿಸಿದರು. ತಾಪಂ ಉಪಾಧ್ಯಕ್ಷ ಅಬ್ಬಾಸ್ ಆಲಿ,ಸ್ಥಾಯಿಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ ವೇದಿಕೆಯಲ್ಲಿದ್ದರು. ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಸ್ವಾಗತಿಸಿ,ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ