ಕೊರೊನಾ ಸಂಕಷ್ಟದಿಂದ ಪಾರು ಮಾಡಲು ಜಿನಚೈತ್ಯಾಲಯದಲ್ಲಿ ಪೂಜೆ

 ಭಾರತೀಯ ಜೈನ್ ಮಿಲನ್ ಬಂಟ್ವಾಳ ಶಾಖೆಯ ಮಾಸಿಕ ಸಭೆಯು  ಬಂಟ್ವಾಳದ ಜಿನಚೈತ್ಯಾಲಯದಲ್ಲಿ ಮಿಲನ್ ಅಧ್ಯಕ್ಷರಾದ  ಡಾ.ಸುದೀಪ್ ಅವರ ಅಧ್ಯಕ್ಷತೆಯಲ್ಲಿ ಜರಗಿತು.ಇದಕ್ಕು ಮುನ್ನ  ಕೊರೋನ ವೈರಸ್ ಸಂಕಷ್ಟದಿಂದ ಜನರನ್ನು ಪಾರುಮಾಡಿ ನೆಮ್ಮದಿಯ ವಾತಾವರಣ ಉಂಟಾಗುವ ನಿಟ್ಟಿನಲ್ಲಿ  ಜಿನ ಚೈತ್ಯಾಲಯದಲ್ಲಿ ವಿವಿಧ ಧಾರ್ಮಿಕ,ವಿಶೇಷ ಪೂಜೆಗಳನ್ನು ನಡೆಸಲಾಯಿತು. ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಅಕ್ಷಯಕುಮಾರ್, ವಲಯ 8ರ ಉಪಾಧ್ಯಕ್ಷ ಸುದರ್ಶನ್ ಜೈನ್, ವಿಭಾಗ ಕಾರ್ಯದರ್ಶಿ ಸುಭಾಶ್ಚಂದ್ರ ಜೈನ್ ಮಾತನಾಡಿದರು. ಇದೇವೇಳೆ ಬಂಟ್ವಾಳ ಪ್ರೇರಣ ಸ್ವಸಹಾಯ ಸಂಘದ ಸದಸ್ಯರು ಆಯೋಜಿಸಿದ್ದ ವನಮಹೋತ್ಸವದ ಪ್ರಯುಕ್ತ ಸಸಿಗಳನ್ನು ಪುರೋಹಿತರಾದ ಪುಷ್ಪರಾಜ್ ಇಂದ್ರ ಇವರಿಗೆ ಗಿಡ ಹಸ್ತಾಂತರಿಸುವ ಮೂಲಕ ವನಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ಕೋಶಾಧಿಕಾರಿ ಅಜಿತ್ ಕುಮಾರ್ ಹಾಜರಿದ್ದರು.  ಕಾರ್ಯದರ್ಶಿ ಜಯಕೀರ್ತಿ ಕಾರ್ಯಕ್ರಮ ನಿರೂಪಿಸಿದರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕೊರೊನಾ ಸಂಕಷ್ಟದಿಂದ ಪಾರು ಮಾಡಲು ಜಿನಚೈತ್ಯಾಲಯದಲ್ಲಿ ಪೂಜೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*