ಜಿಲ್ಲಾ ಸುದ್ದಿ

ಕ್ವಾರಂಟೈನ್ ನಿಯಮ ಉಲ್ಲಂಘನೆ: ಪ್ರಕರಣ ದಾಖಲು

 

ಜಾಹೀರಾತು

ಬಂಟ್ವಾಳ: ಕೊರೊನಾಕ್ಕೆ ಸಂಬಂಧಿಸಿ ಕ್ವಾರಂಟೈನ್ ಉಲ್ಲಂಘನೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಂಟ್ವಾಳ ತಾಲೂಕಿನ ವಿವಿಧ ಠಾಣೆಗಳಲ್ಲಿ ಶುಕ್ರವಾರ ಒಟ್ಟು 8 ಪ್ರಕರಣ ದಾಖಲಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ 5, ಪುಂಜಾಲಕಟ್ಟೆ ಠಾಣೆ 1, ಬಂಟ್ವಾಳ ನಗರ ಹಾಗೂ ವಿಟ್ಲ ಠಾಣೆಯಲ್ಲಿ ತಲಾ ಒಂದೊಂದು ಪ್ರಕರಣ ದಾಖಲಾಗಿದೆ. ಕ್ವಾರಂಟೈನ್ ನಲ್ಲಿದ್ದು, ಹೊರಗಡೆ ತಿರುಗಾಟ ನಡೆಸುತ್ತಿರುವವರ ವಿರುದ್ಧ ಪ್ರಕರಣ ದಾಖಲಿಸುವಂತೆ ಜಿಲ್ಲಾಡಳಿತ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿತ್ತು. ಕೋವಿಡ್ ಪ್ರಕರಣಗಳ ಸಂಖ್ಯೆ ಪ್ರತಿದಿನವೂ ಜಾಸ್ತಿಯಾಗುತ್ತಿದ್ದು, ಕೆಲವು ಸಾವುಗಳೂ ಸಂಭವಿಸಿವೆ. ಕೊರೊನಾ ಸೋಂಕಿತರ ಸಂಪರ್ಕಕ್ಕೆ ಬಂದವರು, ಹೊರರಾಜ್ಯಗಳಿಂದ ಬಂದವರು, ವಿದೇಶಗಳಿಂದ ಬಂದವರಿಗೆ ನಿರ್ದಿಷ್ಟ ದಿನಗಳವರೆಗೆ ಕ್ವಾರಂಟೈನ್ ವಿಧಿಸಿ ಸೂಕ್ತ ವಸತಿ ವ್ಯವಸ್ಥೆಯನ್ನೂ ಮಾಡಲಾಗಿದೆ. ಇದನ್ನು ಉಲ್ಲಂಘಿಸಿ ಹೊರಗಡೆ ಮನಸೋ ಇಚ್ಛೆ ತಿರುಗಾಡುವವರ ವಿರುದ್ಧ ಈಗ ಪ್ರಕರಣ ದಾಖಲಾಗಿದೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

5 hours ago