ಕುಮಾರಧಾರ ನದಿಯಲ್ಲಿ ಮೀನು ಹಿಡಿಯಲು ಹೋದಾಗ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ನದಿಯಲ್ಲಿ ಪತ್ತೆಯಾಗಿದ್ದಾನೆ. ತಾಲೂಕಿನ ಎಡಮಂಗಲದ ದೊಳ್ತಿಲ ಎಂಬಲ್ಲಿ ಕುಮಾರಧಾರ ನದಿಯಲ್ಲಿ ಮೀನು ಹಿಡಿಯಲು ಹೋದ ಯುವಕ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ತಡರಾತ್ರಿ ನಡೆದಿತ್ತು. ನಾಪತ್ತೆಯಾದ ಯುವಕನನ್ನು ದೊಳ್ತಿಲ ರಾಮಣ್ಣ ನಾಯ್ಕ್ ಅವರ ಪುತ್ರ ಪ್ರಕಾಶ್ (26) ಎಂದು ಗುರುತಿಸಲಾಗಿದೆ. ಈತ ತನ್ನ ಸ್ನೇಹಿತರಿಬ್ಬರ ಜೊತೆ ಮೀನು ಹಿಡಿಯಲು ಬಿಟ್ಟಿದ್ದ ಬಲೆಯನ್ನು ಈಜಿ ತರುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗ್ತಿದೆ.
| 22.59 ಕೋಟಿ ರೂ ವೆಚ್ಚದಲ್ಲಿ ರಸ್ತೆ ಚತುಷ್ಪಥಕ್ಕೆ ಶಿಲಾನ್ಯಾಸ ನೆರವೇರಿಸಿ ಕ್ಯಾ.ಬ್ರಿಜೇಶ್ ಚೌಟ (more…)