ಜಿಲ್ಲಾ ಸುದ್ದಿ

ದಕ್ಷಿಣ ಕನ್ನಡ: 10 ತಿಂಗಳಿಂದ 10 ವರ್ಷದ ಒಟ್ಟು 7 ಮಕ್ಕಳಿಗೆ ಸೇರಿ ಒಟ್ಟು 75 ಮಂದಿಗೆ ಇಂದು COVID POSITVE ದೃಢ

10 ದಿನದ ಮಗು, 1, 3, 5, 7 ವರ್ಷದ ತಲಾ ಒಂದು ಮತ್ತು 10 ವರ್ಷದ ಇಬ್ಬರು ಮಕ್ಕಳು ಸೇರಿದಂತೆ 75 ಮಂದಿಯಲ್ಲಿ ಕೊರೊನಾ ದೃಢಪಟ್ಟಿದೆ. ಹಾಗೆಯೇ ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರು ಆತಂಕಕ್ಕೆ ಒಳಗಾಗದೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ ಎಂದು ದ.ಕ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಮನವಿ ಮಾಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೆ 1095 ಪ್ರಕರಣಗಳು ಪತ್ತೆಯಾಗಿದ್ದು, ಜನಸಂಖ್ಯೆಗೆ ಹೋಲಿಸಿದರೆ ಇದು ಶೇಕಡಾ 0.054 ಆಗಿದೆ. ದೃಢಪಟ್ಟಿರುವ ಪ್ರಕರಣಗಳಲ್ಲಿ ಶೇಕಡಾ 50 ಮಂದಿ ಹೊರ ರಾಜ್ಯದಿಂದ ಮತ್ತು ವಿದೇಶದಿಂದ ಬಂದವರು. ಸೋಂಕಿತ ವ್ಯಕ್ತಿಗಳೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ 210 ಹಾಗೂ ದ್ವಿತೀಯ ಸಂಪರ್ಕ ಹೊಂದಿದ 5 ಮಂದಿಗೆ ಮಾತ್ರ ಸೋಂಕು ತಗುಲಿದೆ. ಚಿಕಿತ್ಸೆಗೆ ಒಳಪಟ್ಟವರಲ್ಲಿ ಶೇಕಡಾ 98ರಷ್ಟು ಮಂದಿ ಗುಣಮುಖರಾಗಿರುತ್ತಾರೆ. ವೆಂಟಿಲೇಟರ್ ಮತ್ತು ಆಮ್ಲಜನಕ ನೀಡಿ ಚಿಕಿತ್ಸೆ ಪಡೆಯುವ ಅವಶ್ಯಕತೆಗೆ ಬಿದ್ದವರು ಕೇವಲ 25 ಮಂದಿ ಮಾತ್ರ. ಆದ ಕಾರಣ ಸಾರ್ವಜನಿಕರು ಆತಂಕಕ್ಕೆ ಒಳಗಾಗದಂತೆ ಮತ್ತು ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಕಾಪಾಡುವುದು ಹಾಗೂ ವೈಯಕ್ತಿಕ ಶುಚಿತ್ವಕ್ಕೆ ಹೆಚ್ಚಿನ ಗಮನ ಕೊಡುವಂತೆ ಜಿಲ್ಲಾಧಿಕಾರಿ ವಿನಂತಿಸಿದ್ದಾರೆ.

ಇಂದು ಕೊರೊನಾ ದೃಢಪಟ್ಟ 75 ಮಂದಿಯಲ್ಲಿ 10 ದಿನದ ಮಗು, 1, 3, 5, 7 ವರ್ಷದ ತಲಾ ಒಂದು ಮತ್ತು 10 ವರ್ಷದ ಇಬ್ಬರು ಮಕ್ಕಳು ಸೇರಿದ್ದಾರೆ. 75 ಮಂದಿಯಲ್ಲಿ 11 ಜನ ಅಬುಧಾಬಿ, ಮಸ್ಕತ್, ದುಬೈನಿಂದ ಬಂದವರಾಗಿದ್ದಾರೆ. 29 ಐಎಲ್ಐ, 6 ಸಾರಿ ಪ್ರಕರಣ, 24 ಮಂದಿ ಪ್ರಾಥಮಿಕ ಸಂಪರ್ಕ, ಓರ್ವನಿಗೆ ದ್ವಿತೀಯ ಸಂಪರ್ಕದಿಂದ ಕೊರೊನಾ ದೃಢಪಟ್ಟಿದೆ. 4 ಮಂದಿಯ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ.ಇಂದು 13 ಮಂದಿ ಗುಣಮುಖರಾಗಿದ್ದು, ಇದರಲ್ಲಿ 9 ಮಂದಿ ಪುರುಷರು, ನಾಲ್ಕು ಮಂದಿ ಮಹಿಳೆಯರಾಗಿದ್ದಾರೆ. ಇಂದು ಮೂರು ಮಂದಿ ಸಾವನ್ನಪ್ಪಿದ್ದಾರೆ. ಐದು ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೆ 1095 ಪ್ರಕರಣಗಳು ದೃಢಪಟ್ಟಿದ್ದು, ಇದರಲ್ಲಿ 516 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ 22 ಮಂದಿ ಸಾವನ್ನಪ್ಪಿದ್ದು, 557 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 560 ಮಂದಿಯ ಗಂಟಲು ದ್ರವದ ಮಾದರಿ ಪರೀಕ್ಷೆಗೆ ಕಳುಹಿಸಲಾಗಿದೆ.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts