ಪ್ರಮುಖ ಸುದ್ದಿಗಳು

ರಾಜ್ಯದಲ್ಲಿ ಒಟ್ಟು 11,098 ಗುಣಮುಖ, 15,297 ಮಂದಿಗೆ ಚಿಕಿತ್ಸೆ

  • ಕೊರೊನಾ ಸೋಂಕಿಗೆ ಇಂದು 15 ಸಾವು, 1498 ಹೊಸ ಕೇಸ್

ರಾಜ್ಯದಲ್ಲಿ ಕೋವಿಡ್ 19 ಸೋಂಕಿತ ಪ್ರಕರಣಗಳ ಸಂಖ್ಯೆ ಇಂದು 1498 ಇದ್ದು, ಒಟ್ಟು ಸೋಂಕಿತರ ಸಂಖ್ಯೆ 26,815 ಆಗಿದೆ. ಇವರಲ್ಲಿ ಇಂದು 15 ಮಂದಿ ಸಾವನ್ನಪ್ಪಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 416ಕ್ಕೇರಿದೆ. ಇಂದು 571 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, 11,098 ಮಂದಿ ಒಟ್ಟು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಒಟ್ಟಾರೆಯಾಗಿ ಇಡೀ ರಾಜ್ಯದಲ್ಲಿ ಕೋವಿಡ್ 19ಕ್ಕೆ ಚಿಕಿತ್ಸೆ ಪಡೆಯುತ್ತಿರುವವರು 15,297. ಅವರಲ್ಲಿ 279 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಾಹೀರಾತು

ಬೆಂಗಳೂರು ನಗರದಲ್ಲಿ ಇಂದು 800 ಮಂದಿಗೆ ಸೋಂಕು ತಗಲಿದ್ದರೆ, ಒಟ್ಟು ಸಂಖ್ಯೆ 11,361 ಆಗಿದೆ. ಇವರಲ್ಲಿ 1810 ಬಿಡುಗಡೆ ಹೊಂದಿದ್ದು, 155 ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರ ಒಂದರಲ್ಲೇ 9395 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗೆಯೇ ದಕ್ಷಿಣ ಕನ್ನಡದಲ್ಲಿ 677, ಧಾರವಾಡದಲ್ಲಿ 402 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟಿದೆ? ಮುಂದೆ ಓದಿರಿ.

DAKSHINA KANNADA: ದಕ್ಷಿಣ ಕನ್ನಡ ಜಿಲ್ಲೆಯ ಜನಸಂಖ್ಯೆ 20,89,649. ಅವರಲ್ಲಿ 21,881 ಮಂದಿ ಕೊರೊನಾ ಪರೀಕ್ಷೆ ಮಾಡಿದ್ದಾರೆ. ಅವರಲ್ಲಿ 21,395 ಮಂದಿಯ ಪರೀಕ್ಷಾ ಫಲಿತಾಂಶ ಬಂದಿದೆ. 1359 ಪಾಸಿಟಿವ್ ಆಗಿದೆ. ಇಂದು 83 ಮಂದಿ ಪಾಸಿಟಿವ್ ಆಗಿದೆ. ಈ ಪ್ರಕಾರವಾಗಿ ಜನಸಂಖ್ಯೆ ಆಧಾರದಲ್ಲಿ 0.065 ಶೇಕಡಾ ಮಂದಿ ಕೊರೊನಾ ಪಾಸಿಟಿವ್ ಆಗಿದ್ದಾರೆ. ಇಂದು 99 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 683 ಮಂದಿ ಡಿಸ್ಚಾರ್ಜ್ ಆಗಿದ್ದರೆ, 650 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 26 ಮಂದಿ ಮರಣ ಹೊಂದಿದ್ದಾರೆ.

ಇಂದು ಮೂಡುಬಿದಿರೆ ನಿವಾಸಿ ಸುಮಾರು 65 ವರ್ಷದ ಪುರುಷ ಮಧುಮೇಹ, ಹೃದಯಸಂಬಂಧಿ ಕಾಯಿಲೆ ಮತ್ತು ನ್ಯುಮೋನಿಯಾದಿಂದ ಬಳಲುತ್ತಿದ್ದು, ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಇವರು ಇಂದು ಮೃತಪಟ್ಟಿದ್ದಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.