ಬಂಟ್ವಾಳ

ಲಯನ್ಸ್ ಪ್ರಾಂತೀಯ ಅಧ್ಯಕ್ಷರಾಗಿ ಸಂಜೀವ ಶೆಟ್ಟಿ ನೇಮಕ

ಲಯನ್ಸ್ ಜಿಲ್ಲೆ 317 ಡಿ  ಇದರ ಪ್ರಾಂತೀಯ ಅಧ್ಯಕ್ಷರಾಗಿ ಹಿರಿಯ ಯಕ್ಷಗಾನ ಅರ್ಥಧಾರಿ ಬಿ.ಸಂಜೀವ ಶೆಟ್ಟಿ ಇವರನ್ನು ಲಯನ್ಸ್ ಜಿಲ್ಲಾ ರಾಜ್ಯಪಾಲ ಡಾ. ಗೀತಪ್ರಕಾಶ್ ನೇಮಕಗೊಳಿಸಿದ್ದಾರೆ. ಈ ಹಿಂದೆ ಬಂಟ್ವಾಳ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ , ಕೋಶಾಧಿಕಾರಿಯಾಗಿ, ಜಿಲ್ಲಾ ಸಂಪುಟದಲ್ಲಿ ಹಲವು ವರ್ಷಗಳಿಂದ ಯಕ್ಷಗಾನ ಸಂಯೋಜಕರಾಗಿ ದುಡಿದು, ಪ್ರಥಮ ಬಾರಿಗೆ ಅಂತರ್ ರಾಜ್ಯ ಮಟ್ಟದ ಲಯನ್ಸ್ ಸಮ್ಮೇಳನ ನಡೆಸಿದ ಹೆಗ್ಗಳಿಕೆ ಹೊಂದಿದ್ದಾರೆ. ಮುಂದಿನ ದಿನಗಳಲ್ಲಿ ತನ್ನ ವ್ಯಾಪ್ತಿಯ 8 ಲಯನ್ಸ್ ಕ್ಲಬ್ ಗಳನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಜಾಹೀರಾತು

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.