ಬಂಟ್ವಾಳ ತಾಲೂಕಿನಲ್ಲೀಗ ಕೊರೊನಾ ಪ್ರಕರಣಗಳ ಹೆಚ್ಚಳವಾಗುತ್ತಿದೆ. ನಿನ್ನೆ 7 ಪ್ರಕರಣಗಳು ದಾಖಲಾಗಿದ್ದವು. ಇವಲ್ಲದೆ ರಾಜಕಾರಣಿಗಳಿಗೂ ಸೋಂಕು ಬಾಧಿಸುತ್ತಿರುವ ಕಾರಣ ಸಾರ್ವಜನಿಕರು ಸ್ವಯಂ ಜಾಗೃತರಾಗುತ್ತಿದ್ದಾರೆ. ಈ ನಡುವೆ ಬಂಟ್ವಾಳ ಮಿನಿ ವಿಧಾನಸೌಧ ಪ್ರವೇಶವನ್ನು ಜುಲೈ 10ರವರೆಗೆ ನಿಷೇಧಿಸಲಾಗಿದೆ.
ಬಂಟ್ವಾಳ ಮಿನಿ ವಿಧಾನಸೌಧದಲ್ಲಿರುವ ಸರ್ಕಾರಿ ಕಚೇರಿಗಳನ್ನು ಸ್ಯಾನಿಟೈಸ್ ಮಾಡುವ ಹಿನ್ನೆಲೆಯಲ್ಲಿ ಜುಲೈ 8ರಿಂದ 10ರವರೆಗೆ ಸಾರ್ವಜನಿಕ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್. ತಿಳಿಸಿದ್ದಾರೆ. ಮಂಗಳೂರು ಸಹಾಯಕ ಆಯುಕ್ತರು ಈ ಕುರಿತು ಸೂಚನೆ ನೀಡಿದನ್ವಯ ಮಂಗಳೂರು ಉಪವಿಭಾಗಕ್ಕೆ ಸಂಬಂಧಪಟ್ಟ ಸರ್ಕಾರಿ ಕಚೇರಿಗಳನ್ನು ಸ್ಯಾನಿಟೈಸ್ ಮಾಡಲಾಗುತ್ತಿದೆ. ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟುವ ಸಲುವಾಗಿ ಈ ಕ್ರಮ ವಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಬಂಟ್ವಾಳ ತಾಲೂಕಿನಲ್ಲಿ ಕೊರೊನಾ ಪ್ರಕರಣಗಳ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೆಲ ಹೋಟೆಲ್ ಗಳನ್ನು ಬಂದ್ ಮಾಡಲಾಗಿವೆ.
Be the first to comment on "ಜುಲೈ 10ರವರೆಗೆ ಬಂಟ್ವಾಳ ಮಿನಿ ವಿಧಾನಸೌಧಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧ"