ಜಿಲ್ಲಾ ಸುದ್ದಿ

ಸರ್ಕಾರದ ವಿಮಾ ಪಾಲಿಸಿ: ಕಂದಾಯ, ಪಂಚಾಯತ್ ರಾಜ್ ಇಲಾಖೆಯನ್ನೂ ಸೇರಿಸಿ

ಜಾಹೀರಾತು

ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಒದಗಿಸುತ್ತಿರುವ ವಿಮಾ ಪಾಲಿಸಿಗೆ ಕಂದಾಯ ಮತ್ತು ಪಂಚಾಯತ್ ರಾಜ್ ಇಲಾಖೆಯವರನ್ನೂ ಸೇರಿಸಿಕೊಳ್ಳಿ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಜನಾರ್ದನ ಹೇಳಿದ್ದಾರೆ.

ಈಗಾಗಲೇ ಸರ್ಕಾರ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಉಚಿತ ವಿಮಾ ಸೌಲಭ್ಯವನ್ನು ಅಂಗನವಾಡಿ, ಆಶಾ, ಪೊಲೀಸ್ ಮತ್ತು ಆರೋಗ್ಯ ಕಾರ್ಯಕರ್ತರಿಗೆ ಒದಗಿಸುತ್ತಿದ್ದು, ಇದು ೩೦ ಲಕ್ಷ ರೂಗಳ ಪಾಲಿಸಿಯನ್ನು ಹೊಂದಿರುತ್ತದೆ. ಕೊರೊನಾ ಹರಡಲು ಆರಂಭವಾದ ದಿನದಿಂದ ಇಂದಿನವರೆಗೂ ಗ್ರಾಮೀಣ ಕಾರ್ಯಪಡೆಯಲ್ಲಿ ಗ್ರಾಮಕರಣಿಕರು, ಪಿಡಿಒಗಳು, ಬಿಲ್ ಕಲೆಕ್ಟರ್ ಗಳು ಹಗಲಿರುಳು ಕೆಲಸ ಮಾಡಿದ್ದಾರೆ. ಕಂದಾಯ ಇಲಾಖೆಯಲ್ಲಿ ಜಿಲ್ಲಾಧಿಕಾರಿಯಿಂದ ಗ್ರಾಮ ಸಹಾಯಕರವರೆಗೆ, ಪಂಚಾಯತ್ ರಾಜ್ ಇಲಾಖೆಯಲ್ಲಿ ಜಿಪಂ ಸಿಇಒರಿಂದ ಡಿ ಗ್ರೂಪ್ ನೌಕರರವರೆಗೆ ಎಲ್ಲರೂ ಪ್ರಾಮಾಣಿಕವಾಗಿ ಸಮಯದ ಮಿತಿಯನ್ನು ನೋಡದೆ ಕೊರೊನಾ ವಾರಿಯರ್ಸ್ ಗಳಾಗಿ ದುಡಿಯುತ್ತಿದ್ದು ಪ್ರತಿಯೊಂದು ಕೆಲಸಗಳಲ್ಲೂ ಇತರ ಇಲಾಖೆಗಳೊಂದಿಗೆ ಸಮನ್ವಯದಿಂದ ಕೆಲಸ ಮಾಡುತ್ತಿದ್ದಾರೆ. ಮನೆಯಲ್ಲಿ ವೃದ್ಧರು, ಮಕ್ಕಳಿರುವ ಸಂದರ್ಭವೂ ಇತರ ಇಲಾಖೆಗಳಷ್ಟೇ ತುರ್ತು ಕೆಲಸ ಕಾರ್ಯಗಳನ್ನು ಹಗಲಿರುಳು ನಿರ್ವಹಿಸುವ ಕಂದಾಯ ಮತ್ತು ಪಂಚಾಯತ್ ರಾಜ್ ಇಲಾಖೆಯ ನೌಕರರಿಗೂ ಸರ್ಕಾರದ ಉಚಿತ ವಿಮಾ ಪಾಲಿಸಿ ಒದಗಿಸಿಕೊಡಬೇಕು ಎಂದು ಅವರು ವಿನಂತಿಸಿದ್ದಾರೆ. ಕಂದಾಯ ಇಲಾಖೆ ಕಚೇರಿಗಳಾದ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ, ತಾಲೂಕು ಮತ್ತು ನಾಡಕಚೇರಿಗಳಲ್ಲಿ ಹೆಚ್ಚಿನ ಸಿಬ್ಬಂದಿ ಮಹಿಳಾ ನೌಕರಿದ್ದಾರೆ ಎಂದವರು ತಿಳಿಸಿದ್ದಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.