ಬಂಟ್ವಾಳ ಮಿನಿ ವಿಧಾನಸೌಧಕ್ಕೆ ಬುಧವಾರ ಬೆಳಗ್ಗೆ ಬಂಟ್ವಾಳ ಪುರಸಭೆ ವತಿಯಿಂದ ರಾಸಾಯನಿಕ ದ್ರವ ಸಿಂಪಡಣೆ ಮಾಡಲಾಯಿತು. ಸಹಾಯಕ ಕಮೀಷನರ್ ಸೂಚನೆಯಂತೆ ಈ ಕಾರ್ಯ ನಡೆಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮಿನಿ ವಿಧಾನಸೌಧಕ್ಕೆ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಪುರಸಭೆಯ ಎಲ್ಲ ಮಹಡಿಗಳನ್ನು ಸ್ಯಾನಿಟೈಸ್ ಮಾಡುವ ಪ್ರಕ್ರಿಯೆ ನಡೆಯಿತು.