ಬಂಟ್ವಾಳ

ವಿಧಾನಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್ ಅವರಿಗೆ ಬಂಟ್ವಾಳ ಬಿಜೆಪಿಯಿಂದ ಅಭಿನಂದನೆ

ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಕ್ಷೇತ್ರ ಸಮಿತಿ ವತಿಯಿಂದ ವಿಧಾನಪರಿಷತ್ ಸದಸ್ಯರಾದ ಪ್ರತಾಪ ಸಿಂಹ ನಾಯಕ್ ಅವರಿಗೆ ಅಭಿನಂದನಾ ಸಮಾರಂಭ ಪಕ್ಷದ ಕಚೇರಿಯಲ್ಲಿ ಶುಕ್ರವಾರ ನಡೆಯಿತು.

ಜಾಹೀರಾತು

ಅಧ್ಯಕ್ಷತೆಯನ್ನು ಕ್ಷೇತ್ರದ ಅಧ್ಯಕ್ಷ ದೇವಪ್ಪ ಪೂಜಾರಿ ಬಡಗಬೆಳ್ಳೂರು ವಹಿಸಿದ್ದರು. ಅಭಿನಂದನಾ ಮಾತುಗಳಾನ್ನಾಡಿದ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಕ್ಷವು ಸಂಘಟನಾತ್ಮಕವಾಗಿ ಬಲಿಷ್ಠವಾಗಿಸಿದವರು ಪ್ರತಾಪ್ ಸಿಂಹ ನಾಯಕ್ ಎಂದರು.

ಅಭಿನಂದನೆಯನ್ನು ಸ್ವೀಕರಿಸಿ ಮಾತಾಡಿದ ಪ್ರತಾಪ ಸಿಂಹ ನಾಯಕ್, ಪಕ್ಷ ನೀಡಿದ ಜವಾಬ್ದಾರಿಗಳನ್ನು ನಿರ್ವಂಚನೆಯಿಂದ ಕಾರ್ಯಗತಗೊಳಿಸಿದಾಗ ಪಕ್ಷ ನಮ್ಮನ್ನು ಗುರುತಿಸುತ್ತದೆ. ಬಿಜೆಪಿಯಲ್ಲಿ ಬೂತ್ ಮಟ್ಟದ ಕಾರ್ಯಕರ್ತ ಸಂಸದನಾಗಬಹುದು, ಶಾಸಕನಾಗಬಹುದು ಎಂಬುದಕ್ಕೆ ನಾನೇ ಸಾಕ್ಷಿಯಾಗಿದ್ದೇನೆ ಎಂದರು. ಕ್ಷೇತ್ರದ ಪ್ರ.ಕಾರ್ಯದರ್ಶಿ ಡೊಂಬಯ್ಯ ಅರಳ ಸ್ವಾಗತಿಸಿ ಉಪಾಧ್ಯಕ್ಷರಾದ ಚಿದಾನಂದ ರೈ ಉಳಿ ವಂದಿಸಿದರು. ಪಕ್ಷದ ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts