ರಾಜ್ಯ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳಕ್ಕೆ ಖಾಸಗಿ ಭೇಟಿ ನೀಡಿದ್ದು, ಈ ವೇಳೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹಾಗೂ ಆರೆಸ್ಸೆಸ್ ಹಿರಿಯ ನಾಯಕ ಡಾ. ಕಲ್ಲಡ್ಕ ಪ್ರಭಾಕರ ಭಟ್ ಭೇಟಿ ಮಾಡಿ ಚರ್ಚಿಸಿದರು.ಶುಕ್ರವಾರ ಬೆಳಗ್ಗೆ ಕಲ್ಲಡ್ಕ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಭೇಟಿ ನೀಡಿದ ಸುರೇಶ್ ಕುಮಾರ್, ಕೋವಿಡ್ 19ರ ಸಂದಿಗ್ಧ ಪರಿಸ್ಥಿತಿಯಲ್ಲಿ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಸಮಾಲೋಚನೆ ನಡೆಸಿ ಪ್ರಭಾಕರ ಭಟ್ ಸಲಹೆ ಪಡೆದುಕೊಂಡರು.ಈ ವೇಳೆ ವಿದ್ಯಾಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿ ಮೊದಲಾದವರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕಲ್ಲಡ್ಕ ಪ್ರಭಾಕರ ಭಟ್ ಭೇಟಿ ಮಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್"