ರಾಜ್ಯ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳಕ್ಕೆ ಖಾಸಗಿ ಭೇಟಿ ನೀಡಿದ್ದು, ಈ ವೇಳೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹಾಗೂ ಆರೆಸ್ಸೆಸ್ ಹಿರಿಯ ನಾಯಕ ಡಾ. ಕಲ್ಲಡ್ಕ ಪ್ರಭಾಕರ ಭಟ್ ಭೇಟಿ ಮಾಡಿ ಚರ್ಚಿಸಿದರು.ಶುಕ್ರವಾರ ಬೆಳಗ್ಗೆ ಕಲ್ಲಡ್ಕ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಭೇಟಿ ನೀಡಿದ ಸುರೇಶ್ ಕುಮಾರ್, ಕೋವಿಡ್ 19ರ ಸಂದಿಗ್ಧ ಪರಿಸ್ಥಿತಿಯಲ್ಲಿ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಸಮಾಲೋಚನೆ ನಡೆಸಿ ಪ್ರಭಾಕರ ಭಟ್ ಸಲಹೆ ಪಡೆದುಕೊಂಡರು.ಈ ವೇಳೆ ವಿದ್ಯಾಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿ ಮೊದಲಾದವರು ಉಪಸ್ಥಿತರಿದ್ದರು.