ಬಂಗಾರಪೇಟೆ ತಹಸೀಲ್ದಾರ್ ಹತ್ಯೆ – ಬಂಟ್ವಾಳ ಮಿನಿ ವಿಧಾನಸೌಧ ಮುಂಭಾಗ ಪ್ರತಿಭಟನೆ

ಕೋಲಾರ ಜಿಲ್ಲೆಯ ಬಂಗಾರಪೇಟೆ ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿಯವರಾದ  ಬಿ.ಕೆ.ಚಂದ್ರಮೌಳೇಶ್ವರ  ಹತ್ಯೆ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ಕಂದಾಯ ನೌಕರರ ಸಂಘದ ವತಿಯಿಂದ ಬಂಟ್ವಾಳ ಮಿನಿ ವಿಧಾನಸೌಧದ ಮುಂಭಾಗ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಾಯಿತು.  ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಬಂಟ್ವಾಳ ತಾಲೂಕು ತಹಸೀಲ್ದಾರ್ ರಶ್ಮಿ ಎಸ್.ಆರ್. ಮುಖಾಂತರ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು

ಈ ಸಂದರ್ಭ ಮಾತನಾಡಿದ ಬಂಟ್ವಾಳ ತಹಸೀಲ್ದಾರ್  ರಶ್ಮಿ. ಎಸ್. ಆರ್, ಇದು ಅತ್ಯಂತ ಗಂಭೀರ ವಿಷಯವಾಗಿದ್ದು ಸರ್ಕಾರದ ಪರವಾಗಿ ಕರ್ತವ್ಯ ನಿರ್ವಹಿಸುವ ಸಮಯದಲ್ಲಿ ಸರ್ಕಾರಿ ನೌಕರರಿಗೆ ರಕ್ಷಣೆ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.  ಪಾಣೆಮಂಗಳೂರು ಹೋಬಳಿಯ ಕಂದಾಯ ನಿರೀಕ್ಷಕರಾದ ರಾಮ ಮಾತನಾಡಿ, ಇದೊಂದು ಘೋರ ಕೃತ್ಯವಾಗಿದ್ದು ಸರ್ಕಾರಿ ನೌಕರರು ಭಯದ ವಾತಾವರಣದಲ್ಲಿ ಕೆಲಸ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು . ಬಂಟ್ವಾಳ ತಾಲೂಕು ಗ್ರಾಮಲೆಕ್ಕಿಗರ ಸಂಘದ ಅಧ್ಯಕ್ಷರಾದ ತೌಫೀಕ್ ಮನವಿಯನ್ನು ಓದಿ ತಹಸೀಲ್ದಾರರಿಗೆ ಹಸ್ತಾಂತರಿಸಿದರು.

ಇದೇ ಸಮಯದಲ್ಲಿ ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಮೌನ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾ ಕಂದಾಯ ನೌಕರ ಸಂಘದ ಉಪಾಧ್ಯಕ್ಷರಾದ ಜೆ ಜನಾರ್ಧನ್ ಮತ್ತು ತಾಲೂಕು ಕಚೇರಿಯ ಉಪತಹಸೀಲ್ದಾರರು, ಕಂದಾಯ ನಿರೀಕ್ಷಕರು ಹಾಗೂ ಸಿಬ್ಬಂದಿ ವರ್ಗ ಮತ್ತು ಭೂಮಾಪನ ಶಾಖೆ ಸಿಬ್ಬಂದಿ ಉಪಸ್ಥಿತರಿದ್ದರು.

 

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಂಗಾರಪೇಟೆ ತಹಸೀಲ್ದಾರ್ ಹತ್ಯೆ – ಬಂಟ್ವಾಳ ಮಿನಿ ವಿಧಾನಸೌಧ ಮುಂಭಾಗ ಪ್ರತಿಭಟನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*