ಎಸ್.ಎಸ್.ಎಲ್.ಸಿ. ಪರೀಕ್ಷೆಯು ಈ ಬಾರಿ ಕೊರೊನಾ ಆತಂಕದ ನಡುವೆಯೂ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಬಂಟ್ವಾಳ ತಾಲೂಕಿನ ಪೊಳಲಿ ಶ್ರೀ ರಾಜರಾಜೇಶ್ವರಿ ಸನ್ನಿಧಿಗೆ ಶುಕ್ರವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ತಾಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ನಾನಾ ಇಲಾಖೆಗಳ ಅಧಿಕಾರಿಗಳು ಈ ವೇಳೆ ಉಪಸ್ಥಿತರಿದ್ದರು. ಇದೇ ವೇಳೆ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಬಂಟ್ವಾಳ ತಾಲೂಕಿನ ಶಿಕ್ಷಕರ ತಂಡವನ್ನು ಅಭಿನಂದಿಸಿದರು. ನಿರಾತಂಕವಾಗಿ ಎಸ್.ಎಸ್.ಎಲ್. ಸಿ ಪರೀಕ್ಷೆ ಬರೆಯಲು ಸಹಕಾರಿಯಾದ ಮಕ್ಕಳು, ಪೋಷಕರಿಗೆ ಅವರು ಧನ್ಯವಾದ ಸಲ್ಲಿಸಿದರು.