ಪುದು ಗ್ರಾಮದ ಫರಂಗಿಪೇಟೆ ಜುಮಾ ಮಸೀದಿಯ ಅಧ್ಯಕ್ಷ, ಸಾಮಾಜಿಕ, ರಾಜಕೀಯ, ಧಾರ್ಮಿಕ ಮುಖಂಡ ಮುಹಮ್ಮದ್ ಬಾವ (72) ಅಲ್ಪ ಕಾಲದ ಅಸೌಖ್ಯದಿಂದ ಶನಿವಾರ ಬೆಳಗ್ಗೆ ನಿಧನರಾಗಿದ್ದಾರೆ.
ಫರಂಗಿಪೇಟೆ ಜುಮಾ ಮಸೀದಿಯ ಅಧ್ಯಕ್ಷರಾಗಿ 25ಕ್ಕೂ ಅಧಿಕ ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಅವರು ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿದ್ದರು. ಕಿದ್ಮತ್ತುಲ್ ಇಸ್ಲಾಮ್ ಅಸೋಸಿಯೇಷನ್ ಫರಂಗಿಪೇಟೆ ಇದರ ಮುಂದಾಳತ್ವ ವಹಿಸಿದ್ದ ಮುಹಮ್ಮದ್ ಬಾವಾ ಅವರು ಈ ಸಂಘಟನೆಯ ಮೂಲಕ ಪ್ರತೀ ವರ್ಷ 10 ಜೋಡಿ ಬಡ ಹೆಣ್ಣು ಮಕ್ಕಳ ಸಾಮೂಹಿಕ ವಿವಾಹ ನಡೆಸಲಾಗುತ್ತಿದೆ. ಫರಂಗಿಪೇಟೆ ಜಮಾಅತ್ ನಲ್ಲಿ ನಡೆಯುವ ಎಲ್ಲಾ ಸಾಮಾಜಿಕ, ಧಾರ್ಮಿಕ ಕಾರ್ಯಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದರು. ಅಲ್ಲದೆ ಪುದು ಗ್ರಾಮ ಪಂಚಾಯತ್ ಸದಸ್ಯರಾಗಿ, ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.ಮೃತರು ಪತ್ನಿ, ನಾಲ್ವರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಸಂತಾಪ: ಫರಂಗಿಪೇಟೆ ಜುಮಾ ಮಸೀದಿಯ ಅಧ್ಯಕ್ಷರಾಗಿ ನಿರಂತರ ಮೂರು ದಶಕಗಳಿಂದ ಸೇವೆ ಸಲ್ಲಿಸುತ್ತಿದ್ದ ಮುಹಮ್ಮದ್ ಭಾವ ಅವರ ನಿಧನಕ್ಕೆ ಮಸೀದಿಯ ಉಪಾಧ್ಯಕ್ಷರೂ ಆದ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಉಮರ್ ಫಾರೂಕ್ ಫರಂಗಿಪೇಟೆ, ಪುದು ಗ್ರಾಮ ಪಂಚಾಯತ್ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬಂಟ್ವಾಳ ತಾಲೂಕು ಅಧ್ಯಕ್ಷ ಸಲೀಂ ಕುಂಪನಮಜಲು, ಸಂವಿಧಾನ ಸಂರಕ್ಷಣಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಮುನೀಶ್ ಅಲಿ ಸಂತಾಪ ವ್ಯಕ್ತಪಡಿಸಿದ್ದಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…