ಕಳೆದೆರಡು ದಿನಗಳಿಂದ ನಾಪತ್ತೆಯಾಗಿದ್ದ ಸಜೀಪಮೂಡ ಗ್ರಾಮದ ಸುಭಾಷ್ ನಗರ ನಿವಾಸಿ ಗೋಪಿ ಪೂಜಾರಿ(49) ಅವರ ಮೃತದೇಹ ಸೋಮವಾರ ತುಂಬೆ ಸಮೀಪದಲ್ಲಿ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಕೆಲವು ದಿನಗಳ ಹಿಂದೆ ಬಿ.ಸಿ.ರೋಡಿನ ಚಿಕ್ಕಯ್ಯಮಠದಲ್ಲಿರುವ ಅಕ್ಕನ ಮನೆಗೆ ಬಂದಿದ್ದ ಮಹಿಳೆ ಜು. ೧೧ರಂದು ಮುಂಜಾನೆ ನಾಪತ್ತೆಯಾಗಿದ್ದರು. ಬಳಿಕ ಪಾಣೆಮಂಗಳೂರು ಸೇತುವೆಯ ಸಮೀಪದ ಮಹಿಳೆಯ ಶಾಲು ಹಾಗೂ ಬಳೆ ಪತ್ತೆಯಾದ ಹಿನ್ನೆಲೆಯಲ್ಲಿ ನದಿಗೆ ಹಾರಿದ್ದಾರೆ ಎಂದು ಹುಡುಕಾಟ ನಡೆಸಲಾಗಿತ್ತು. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…