ಜಾಹೀರಾತು
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿರುವ ಕರೋನಾ ಸೋಂಕಿತರ ಸಹಾಯಕ್ಕಾಗಿ ಪುರಸಭೆ ಕಾರ್ಯಲಯದಲ್ಲಿ ಸಹಾಯವಾಣಿ ಕೇಂದ್ರ ಆರಂಭಗೊಂಡಿದೆ. ಕೋವಿಡ್ 19 ದೃಢಪಟ್ಟು ಮನೆಯಲ್ಲಿಯೇ ಪ್ರತ್ಯೇಕವಾಗಿರುವ ( ಹೋಂ ಐಸೋಲೇಷನ್ ) ವ್ಯಕ್ತಿಗಳಿಗೆ ವೈದ್ಯರು ವಿಡಿಯೋ ಕಾಲ್ ಮೂಲಕ ಸಲಹೆ ಹಾಗೂ ಮಾರ್ಗದರ್ಶನ ನೀಡಲಿದ್ದಾರೆ ಎಂದು ಪುರಸಭೆಯ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ ತಿಳಿಸಿದ್ದಾರೆ. ಬಂಟ್ವಾಳ ಪುರಸಭೆಯಲ್ಲಿ ಸಹಾಯವಾಣಿಗೆ ಚಾಲನೆ ನೀಡಲಾಗಿದ್ದು ಶುಕ್ರವಾರ ಬಂಟ್ವಾಳ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಹಸೀನಾ ವಿಡಿಯೋ ಕಾಲ್ ಮೂಲಕ ಸೋಂಕಿತರ ಆರೋಗ್ಯ ವಿಚಾರಿಸಿದರು. ಪ್ರಸ್ತುತ ಒಟ್ಟು 37 ಮಂದಿ ಹೋಮ್ ಐಸೋಲೇಶನ್ನಲ್ಲಿ ವೈದ್ಯರ ನಿಗಾದಲ್ಲಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಬಂಟ್ವಾಳ ಪುರಸಭೆ ಕಾರ್ಯಾಲಯದಲ್ಲಿ ಕೋವಿಡ್ ಸಹಾಯವಾಣಿ ಆರಂಭ"