ಜಿಲ್ಲಾ ಸುದ್ದಿ

ಮಗ, ಮೊಮ್ಮಗನಿಂದ ವೃದ್ಧೆಗೆ ಥಳಿತ ವಿಡಿಯೋ ವೈರಲ್: ಬೆಳ್ತಂಗಡಿ ಪೊಲೀಸರಿಂದ ಆರೋಪಿಗಳ ಬಂಧನ

ಬೆಳ್ತಂಗಡಿ ತಾಲೂಕಿನ ಸವಣಾಲು ಎಂಬಲ್ಲಿ ಮಗ ಮತ್ತು ಮೊಮ್ಮಗ ಸೇರಿ ವೃದ್ಧೆ ತಾಯಿಯನ್ನು ಹಿಗ್ಗಾಮುಗ್ಗಾ ಥಳಿಸಿ ಎತ್ತಿ ಬಿಸಾಡಿದ ರಾಕ್ಷಸಿ ಕೃತ್ಯ ನಡೆದ ಘಟನೆಯ ವಿಡಿಯೋ ಇಂದು ಹರಿದಾಡಿದ್ದು, ಇದನ್ನು ಗಮನಿಸಿದ ಬೆಳ್ತಂಗಡಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ, ಆರೋಪಿಗಳನ್ನು ಬಂಧಿಸಿದ್ದಾರೆ.

ಜಾಹೀರಾತು

ವೃದ್ಧೆ ಅಪ್ಪಿ ಶೆಟ್ಟಿ ಎಂಬರಿಗೆ ಅವರ ಮಗ ಶ್ರೀನಿವಾಸ್​ ಶೆಟ್ಟಿ ಹಾಗೂ ಮೊಮ್ಮಗ ಪ್ರದೀಪ್ ಶೆಟ್ಟಿ ಕಂಠಪೂರ್ತಿ ಕುಡಿದು ನಿಸ್ಸಾಹಯಕ ಸ್ಥಿತಿಯಲ್ಲಿರುವ ಅಪ್ಪಿಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ಎತ್ತಿ ಬಿಸಾಡಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿರುವ ಅಪ್ಪಿ ಶೆಟ್ಟಿ ಕಳೆದ ಕೆಲ ವರ್ಷಗಳಿಂದ ಮಲಗಿದ್ದಲ್ಲೇ ಇದ್ದಾರೆ. ಪ್ರತಿದಿನ ಈ ಇಬ್ಬರು ಇದೇ ರೀತಿ ಕುಡಿದು ಬಂದು ಹಲ್ಲೆ ನಡೆಸುತ್ತಿದ್ದಾರೆ. ಈ ವಿಡಿಯೋ ನೋಡಿ ತಕ್ಷಣ ಕಾರ್ಯಪ್ರವೃತ್ತರಾದ ಬೆಳ್ತಂಗಡಿ ಸರ್ಕಲ್ ಇನ್ಸ್​ಪೆಕ್ಟರ್ ಸಂದೇಶ್ ಪಿ ಜಿ ಮಾರ್ಗದರ್ಶನದಲ್ಲಿ ಸಬ್ ಇನ್ಸ್ ಪೆಕ್ಟರ್ ನಂದಕುಮಾರ್ ನೇತೃತ್ವದ ಪೊಲೀಸರ ತಂಡ, ಹಲ್ಲೆ ನಡೆಸಿದ ಇಬ್ಬರನ್ನೂ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಬಂಧಿಸಿದ್ದಾರೆ. ಗಾಯಗೊಂಡಿರುವ ವೃದ್ಧೆಯನ್ನು ಬೆಳ್ತಂಗಡಿ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ