ಜಾಹೀರಾತು
ಜಾಹೀರಾತು
ಬಂಟ್ವಾಳ ತಾಲೂಕಿನ ಮಾಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೋವಿಡ್ ಹೆಲ್ಪ್ ಡೆಸ್ಕ್ ಆರಂಭಗೊಂಡಿದೆ. ಮಾಣಿ ಗ್ರಾಪಂಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಸೆಲ್ವಮಣಿ ಮತ್ತು ತಾಪಂ ಇಒ ರಾಜಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಗ್ರಾಪಂ ಪಿಡಿಒ ನಾರಾಯಣ ಗಟ್ಟಿ ಉಪಸ್ಥಿತರಿದ್ದರು. ಕೋವಿಡ್-19 ಹೆಲ್ಪ್ ಡೆಸ್ಕ್ ಮೂಲಕ ಗ್ರಾಪಂನ ಸಿಬ್ಬಂದಿಯೋರ್ವರು ಪ್ರತಿ ದಿನ ಪಂಚಾಯಿತಿ ವ್ಯಾಪ್ತಿಯಲ್ಲಿರುವ 65 ವರ್ಷ ಪ್ರಾಯ ದಾಟಿದವರ ಆರೋಗ್ಯದ ಸ್ಥಿತಿಗತಿಯನ್ನು ವಿಚಾರಿಸುತ್ತಾರೆ. ಮಾಣಿಯಲ್ಲಿ ಶುಕ್ರವಾರ ಸುಮಾರು 25 ಮಂದಿಯನ್ನು ದೂರವಾಣಿ ಮೂಲಕ ಸಂಪರ್ಕಿಸಿ ಆರೋಗ್ಯದ ಬಗ್ಗೆ ವಿಚಾರಿಸಲಾಯಿತು.ಪ್ರತೀ ದಿನ ಈ ಕಾರ್ಯ ನಡೆಯಲಿದೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮಾಣಿ ಗ್ರಾಪಂ ಕಾರ್ಯಾಲಯದಲ್ಲಿ ಕೋವಿಡ್ ಹೆಲ್ಪ್ ಡೆಸ್ಕ್ ಆರಂಭ, ಜಿಪಂ ಸಿಇಒ ಪರಿಶೀಲನೆ"