ಅಲ್ಟೋ ಕಾರ್ ಡ್ರೈವರ್ ನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ದಕ್ಷಿಣ ಕನ್ನಡದ ಸುಳ್ಯದ ಓಡಬಾಯಿ ಬಳಿಯ ಅಗ್ನಿಶಾಮಕ ಠಾಣೆ ಮುಂಭಾಗ ಶನಿವಾರ ನಡೆದಿದೆ. ಸುಳ್ಯ ಕಡೆಯಿಂದ ಪುತ್ತೂರಿಗೆ ಕಾರು ಹೋಗುತ್ತಿತ್ತು. ಢಿಕ್ಕಿಯ ರಭಸಕ್ಕೆ ಕಾರು ರಸ್ತೆಯಲ್ಲಿ ಮಗುಚಿ ಬಿದ್ದಿತ್ತು. ಪರಿಣಾಮ ಕಾರಿನಲ್ಲಿದ್ದ ಓರ್ವ ಮಹಿಳೆ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ. ಕೂಡಲೇ ಸ್ಥಳೀಯರು ಗಾಯಾಳುಗಳನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…