ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಒಟ್ಟು 285 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇಂದು104 ಮಂದಿ ಸೇರಿ 1491 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 2028 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 28,784 ಮಂದಿಯ ಆರೋಗ್ಯ ತಪಾಸಣೆ ನಡೆಸಲಾಗಿದ್ದು, 3596 ಮಂದಿಗೆ ಸೋಂಕು ತಗಲಿದೆ.
ದಕ್ಷಿನ ಕನ್ನಡ ಜಿಲ್ಲೆಯಲ್ಲಿ ಇಂದು 2 ಮಂದಿ ಸಾವನ್ನಪ್ಪಿದ್ದಾರೆ. ಇವರಲ್ಲಿ ಕೋವಿಡ್ ಸೋಂಕು ಇರುವುದು ಕಂಡುಬಂದಿದ್ದು, ಈ ಪ್ರಕರಣಗಳಿಗೆ ಸಂಬಂಧಿಸಿ ಮರಣದ ಕಾರಣ ನಿರ್ಧರಿಸಲು ಜಿಲ್ಲಾ ಮಟ್ಟದ ತಜ್ಞರ ಸಮಿತಿಯಿಂದ ವರದಿ ಸ್ವೀಕೃತವಾಗಲು ಬಾಕಿ ಇರುತ್ತದೆ.
ಮಂಗಳೂರು ನಿವಾಸಿ 77 ವರ್ಷದ ಮಹಿಳೆ ಕ್ಯಾನ್ಸರ್, ಅಸ್ತಮಾ, ಆರ್ಥರೈಟಿಸ್ ಕಾಯಿಲೆಗಳಿಂದ ಬಳಲುತ್ತಿದ್ದು, ಕೊನೆಗೆ ಕೋವಿಡ್ ಸೋಂಕು ತಗಲಿರುವುದು ಕಂಡುಬಂದಿತ್ತು. 53 ವರ್ಷದ ಪುರುಷ ಬಹುಅಂಗಾಂಗ ವೈಫಲ್ಯದಿಂದ ಮತ್ತು ಡಯಾಬಿಟಿಸ್ ನಿಂದ ಬಳಲುತ್ತಿದ್ದು, ಅವರಿಗೆ ಕೊರೊನಾ ಸೋಂಕು ತಗಲಿರುವುದು ಕಂಡುಬಂದಿತ್ತು ಎಂದು ಜಿಲ್ಲಾಧಿಕಾರಿ ಹೊರಡಿಸಿದ ಬುಲೆಟಿನ್ ನಲ್ಲಿ ತಿಳಿಸಲಾಗಿದೆ.
Be the first to comment on "ಇವತ್ತು 285 ಮಂದಿಗೆ ಸೋಂಕು, ದಕ್ಷಿಣ ಕನ್ನಡ ಜಿಲ್ಲೆಯಲ್ಲೀಗ 2028 ಮಂದಿಗೆ ಚಿಕಿತ್ಸೆ"