ವಿಟ್ಲ

ಕೋವಿಡ್ ಹಿನ್ನೆಲೆ: ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯಿಂದ ಹಲವು ಸೇವಾ ಕಾರ್ಯ

ಜಾಹೀರಾತು

ಬಂಟ್ವಾಳ ತಾಲೂಕಿನ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅವರ ಆಶೀರ್ವಾದದಲ್ಲಿ ನಡೆಯುತ್ತಿರುವ ಒಡಿಯೂರು ಶ್ರೀ ಚ್ಯಾರಿಟೇಬಲ್ ಟ್ರಸ್ಟ್ ಸಂಚಾಲಿತ ಗ್ರಾಮವಿಕಾಸ ಯೋಜನೆ ವತಿಯಿಂದ ಹಲವು ಸೇವಾ ಕಾರ್ಯಗಳನ್ನು ಕೋವಿಡ್ ಹಿನ್ನೆಲೆಯಲ್ಲಿ ದ.ಕ, ಉಡುಪಿ ಜಿಲ್ಲೆಗಳ ಫಲಾನುಭವಿಗಳಿಗೆ ನಡೆಸಲಾಗಿದೆ.ಗ್ರಾಮೋತ್ಸವದ ಅಂಗವಾಗಿ ಒಡಿಯೂರು ಶ್ರೀ ಚ್ಯಾರಿಟೇಬಲ್ ಟ್ರಸ್ಟ್ ಸಂಚಾಲಿತ ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ ವತಿಯಿಂದ .. ಜಿಲ್ಲೆಯಲ್ಲಿ ಉಚಿತ ಹೊಲಿಗೆ ತರಬೇತಿ, 2 ಭಾಗಗಳಲ್ಲಿ ಉಚಿತ ನೇತ್ರ ತಪಾಸಣೆ ಶಿಬಿರ ನಡೆಸಲಾಗಿದೆ. ಕೋವಿಡ್-19 ಸಂದರ್ಭದಲ್ಲಿ 2000ಕ್ಕೂ ಮಿಕ್ಕಿ ಮನೆಗಳಿಗೆ ದಿನಬಳಕೆ ಸಾಮಗ್ರಿ ವಿತರಿಸಲಾಗಿದೆ. ಉಡುಪಿ ಜಿಲ್ಲೆಯಲ್ಲಿ 5 ಭಾಗಗಳಲ್ಲಿ ಉಚಿತ ನೇತ್ರ ತಪಾಸಣೆ ಶಿಬಿರ, ಕಾರ್ಕಳಬೆಳ್ವಾಯಿ ಗ್ರಾಮದ ಘಟಕ ಸಮಿತಿ ವತಿಯಿಂದ 2 ಶಾಲೆಯ 600 ಮಕ್ಕಳಿಗೆ ಉಚಿತ ಸಮವಸ್ತ್ರ ನೀಡಲಾಗಿದೆ. .., ಉಡುಪಿ, ಕಾಸರಗೋಡು ಜಿಲ್ಲೆಗಳಲ್ಲಿ ಅನಾರೋಗ್ಯ ಚಿಕಿತ್ಸೆಗಾಗಿ, ಆಕಸ್ಮಿಕ ಘಟನೆ, ಪ್ರಕೃತಿ ವಿಕೋಪ ಸಂಘಸಂಸ್ಥೆಗಳಿಗೆ, ಧಾರ್ಮಿಕ ಶ್ರದ್ಧಾಕೇಂದ್ರಗಳಿಗೆ, ಶೈಕ್ಷಣಿಕ ಚಟುವಟಿಕೆಗಳಿಗೆ, ಸ್ವಉದ್ಯೋಗ, ಶಾಲಾಭಿವೃದ್ಧಿಗೆ, ಸಹಾಯ ಅಪೇಕ್ಷೆಗಳಿಗೆ ಸ್ಪಂದಿಸಲಾಗಿದೆ. ಒಡಿಯೂರು ಶ್ರೀ ಚ್ಯಾರಿಟೇಬಲ್ ಟ್ರಸ್ಟ್ ಮತ್ತು ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತ ಇವರ ಮೂಲಕ ಗ್ರಾಮವಿಕಾಸ ಯೋಜನೆಯ 171 ಸಿಬಂದಿಗಳಿಗೆ ಕ್ಷೇತ್ರದಿಂದ ಕೋವಿಡ್-19 ಸಂದರ್ಭ ಕೋವಿಡ್ ಸಹಾಯಧನ ರೂ. 8.55,000 ನೀಡಲಾಗಿದೆ. ಕೃಷಿ, ಕಾನೂನು, ಮಹಿಳಾ ಸಬಲೀಕರಣ, ನೈತಿಕ ಶಿಕ್ಷಣ, ಆರೋಗ್ಯದ ಅರಿವು, ವನಮಹೋತ್ಸವ, ಪರಿಸರ ಸಂರಕ್ಷಣೆಗೆ ಸಂಬಂಧಿಸಿದಂತೆ ಗ್ರಾಮಗಳಲ್ಲಿ ಮಾಹಿತಿ ಕಾರ್ಯಕ್ರಮಗಳನ್ನು ಸಂಘಟಿಸಲಾಗಿದೆ. ವಿಕಾಸವಾಹಿನಿ ಸದಸ್ಯರ ಪ್ರಗತಿಗಾಗಿ ಅಧ್ಯಯನ ಪ್ರವಾಸ, ಧಾರ್ಮಿಕ ಪ್ರವಾಸಗಳನ್ನು ಹಮ್ಮಿಕೊಳ್ಳಲಾಗಿದೆ.

5143 ಒಡಿಯೂರು ಶ್ರೀ ವಿಕಾಸವಾಹಿನಿ ಸ್ವಸಹಾಯ ಸಂಘಗಳು ಕಾರ್ಯಾಚರಿಸುತ್ತಿದ್ದು, 163 ಘಟಸಮಿತಿಗಳಿವೆ. 10 ಬಾಲವಿಕಾಸ ಕೇಂದ್ರಗಳು ನಿರಂತರವಾಗಿ ನಡೆಯುತ್ತಿವೆ. ಒಡಿಯೂರು ಶ್ರೀ ಗುರುದೇವ ಸೇವಾ ಬಳಗ, ಒಡಿಯೂರು ಶ್ರೀ ವಜ್ರಮಾತಾ ಮಹಿಳಾವಿಕಾಸ ಕೇಂದ್ರದ ಘಟಕಗಳು ರಾಜ್ಯ ಹಾಗೂ ಹೊರರಾಜ್ಯಗಳಲ್ಲಿ ಸುಮಾರು ೩೦ಕ್ಕಿಂತಲೂ ಮಿಕ್ಕಿ ಘಟಕಗಳು ಸೇವಾ ಕಾರ್ಯಗಳಲ್ಲಿ ತೊಡಗಿಕೊಂಡಿವೆ.

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.