ಬಂಟ್ವಾಳ ತಾಲೂಕಿನ ನಡುಮೊಗರು ಸರಕಾರಿ ಶಾಲಾ ಕಟ್ಟಡದ ಮೇಲ್ಛಾವಣಿ ಕುಸಿದು ಕಟ್ಟಡ ಸಂಪೂರ್ಣ ಹಾನಿಗೊಂಡಿರುವ ಘಟನೆ ಭಾನುವಾರ ಸಂಜೆ ನಡೆದಿದೆ. ಶಾಲೆಯ ಕುಸಿದ ಕಟ್ಟಡವು ಹಳೆಯದಾಗಿದ್ದು, ಕಳೆದ ಬಾರಿ ಅದರ ಮೇಲ್ಛಾವಣಿ ದುರಸ್ತಿ ಮಾಡಲಾಗಿತ್ತು. ಕಟ್ಟಡಕ್ಕೆ ಪೂರ್ತಿ ಹಾನಿಯಾಗಿದ್ದು, ಘಟನೆಯ ಕುರಿತು ಸ್ಥಳೀಯರು ಜನಪ್ರತಿನಿಧಿಗಳು ಸೇರಿದಂತೆ ಅಧಿಕಾರಿ ವರ್ಗಕ್ಕೆ ಮಾಹಿತಿ ನೀಡಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ಶಾಲೆಯಲ್ಲಿ ಚಟುವಟಿಕೆಗಳು ಇಲ್ಲದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ.