ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಬಿಜೆಪಿ ಮುಖಂಡ, ಸಾಮಾಜಿಕ ಮುಂದಾಳು ಮೂಡಾಜೆ ವಿಠಲ ಭಟ್ (57) ಅನಾರೋಗ್ಯದಿಂದ ನಿಧನರಾದರು.
ಕೆಲವು ದಿನಗಳಿಂದ ಡೆಂಗೆ ಜ್ವರದಿಂದ ಬಳಲುತ್ತಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು ಎಂದು ಮೂಲಗಳು ತಿಳಿಸಿವೆ. ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಮೂಡಾಜೆ ವಿಠಲ ಭಟ್ ಅವರ ನಿಧನಕ್ಕೆ ಹಲವಾರು ಮುಖಂಡರು, ಅಭಿಮಾನಿಗಳು ಶೋಕ ವ್ಯಕ್ತಪಡಿಸಿದ್ದಾರೆ.