ಹಿರಿಯ ರಾಜಕಾರಣಿ, ಕೇಂದ್ರ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅವರು ಜುಲೈ 4ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೋವಿಡ್ ಸೋಂಕಿನಿಂದಾಗಿ ದಾಖಲಾಗಿದ್ದರು. ಈ ಸಂದರ್ಭ ಅವರ ಅಭಿಮಾನಿಗಳು ಜಿಲ್ಲೆಯ ನಾನಾ ದೇವಸ್ಥಾನಗಳಲ್ಲಿ ಪೂಜೆ, ಪ್ರಾರ್ಥನೆಗಳನ್ನು ಸಲ್ಲಿಸಿ ಶೀಘ್ರ ಗುಣಮುಖರಾಗಲೆಂದು ಹಾರೈಸಿದ್ದರು. ದೈವ ದೇವರ ಅನುಗ್ರಹದಿಂದಾಗಿ ನಾವೆಲ್ಲರೂ ಗುಣಮುಖರಾಗಿದ್ದು, ನಮ್ಮ ಕ್ಷೇಮಕ್ಕಾಗಿ ಪ್ರಾರ್ಥಿಸಿದ ಎಲ್ಲ ಬಂಧುಗಳಿಗೆ, ಹಿತೈಷಿಗಳಿಗೆ, ಉತ್ತಮ ಚಿಕಿತ್ಸೆ ನೀಡಿದ ವೈದ್ಯರು, ದಾದಿಯರು, ಸಿಬ್ಬಂದಿ ವರ್ಗಕ್ಕೆ ಮತ್ತು ಸಂಸ್ಥೆಗೆ ಧನ್ಯವಾದಗಳು ಎಂದವರು ಸಂದೇಶದಲ್ಲಿ ತಿಳಿಸಿದ್ದಾರೆ. ಕೊರೊನಾ ರೋಗಕ್ಕೆ ಯಾರೂ ಭಯಪಡಬೇಕಾಗಿಲ್ಲ. ಪ್ರತಿಯೊಬ್ಬರೂ ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳಿ, ರೋಗನಿರೋಧಕ ಶಕ್ತಿಯನ್ನು ವೃದ್ಧಿಸಲು ಉತ್ತಮ ಪೌಷ್ಠಿಕ ಆಹಾರ, ಕಷಾಯ ಸೇವನೆ ಮಾಡಿ. ಪ್ರತಿಯೊಬ್ಬರೂ ಜಾಗ್ರತೆ ವಹಿಸಿ. ಸಾರ್ವಜನಿಕ ಸ್ಥಳದಲ್ಲಿ ಪ್ರತಿಯೊಬ್ಬರೂ ಮಾಸ್ಕ್ ಧರಿಸಿ ಎಂದವರು ಸಲಹೆ ನೀಡಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to comment on "ಹಿರಿಯ ರಾಜಕಾರಣಿ ಬಿ.ಜನಾರ್ದನ ಪೂಜಾರಿ ಗುಣಮುಖ, ಆತ್ಮಸ್ಥೈರ್ಯವಿದ್ದರೆ ಕೊರೊನಾ ಜಯಿಸಬಹುದು ಎಂಬ ಸಂದೇಶ"