ಬಂಟ್ವಾಳ

ಹಿರಿಯ ರಾಜಕಾರಣಿ ಬಿ.ಜನಾರ್ದನ ಪೂಜಾರಿ ಗುಣಮುಖ, ಆತ್ಮಸ್ಥೈರ್ಯವಿದ್ದರೆ ಕೊರೊನಾ ಜಯಿಸಬಹುದು ಎಂಬ ಸಂದೇಶ

ಹಿರಿಯ ರಾಜಕಾರಣಿ, ಕೇಂದ್ರ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅವರು ಜುಲೈ 4ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೋವಿಡ್ ಸೋಂಕಿನಿಂದಾಗಿ ದಾಖಲಾಗಿದ್ದರು. ಈ ಸಂದರ್ಭ ಅವರ ಅಭಿಮಾನಿಗಳು ಜಿಲ್ಲೆಯ ನಾನಾ ದೇವಸ್ಥಾನಗಳಲ್ಲಿ ಪೂಜೆ, ಪ್ರಾರ್ಥನೆಗಳನ್ನು ಸಲ್ಲಿಸಿ ಶೀಘ್ರ ಗುಣಮುಖರಾಗಲೆಂದು ಹಾರೈಸಿದ್ದರು. ದೈವ ದೇವರ ಅನುಗ್ರಹದಿಂದಾಗಿ ನಾವೆಲ್ಲರೂ ಗುಣಮುಖರಾಗಿದ್ದು, ನಮ್ಮ ಕ್ಷೇಮಕ್ಕಾಗಿ ಪ್ರಾರ್ಥಿಸಿದ ಎಲ್ಲ ಬಂಧುಗಳಿಗೆ, ಹಿತೈಷಿಗಳಿಗೆ, ಉತ್ತಮ ಚಿಕಿತ್ಸೆ ನೀಡಿದ ವೈದ್ಯರು, ದಾದಿಯರು, ಸಿಬ್ಬಂದಿ ವರ್ಗಕ್ಕೆ ಮತ್ತು ಸಂಸ್ಥೆಗೆ ಧನ್ಯವಾದಗಳು ಎಂದವರು ಸಂದೇಶದಲ್ಲಿ ತಿಳಿಸಿದ್ದಾರೆ. ಕೊರೊನಾ ರೋಗಕ್ಕೆ ಯಾರೂ ಭಯಪಡಬೇಕಾಗಿಲ್ಲ. ಪ್ರತಿಯೊಬ್ಬರೂ ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳಿ, ರೋಗನಿರೋಧಕ ಶಕ್ತಿಯನ್ನು ವೃದ್ಧಿಸಲು ಉತ್ತಮ ಪೌಷ್ಠಿಕ ಆಹಾರ, ಕಷಾಯ ಸೇವನೆ ಮಾಡಿ. ಪ್ರತಿಯೊಬ್ಬರೂ ಜಾಗ್ರತೆ ವಹಿಸಿ. ಸಾರ್ವಜನಿಕ ಸ್ಥಳದಲ್ಲಿ ಪ್ರತಿಯೊಬ್ಬರೂ ಮಾಸ್ಕ್ ಧರಿಸಿ ಎಂದವರು ಸಲಹೆ ನೀಡಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ