ಬಂಟ್ವಾಳ

ಜಿಪಂ ಮಾಜಿ ಸದಸ್ಯ, ಸಾಮಾಜಿಕ ಧುರೀಣ ಎಸ್. ಅಬ್ಬಾಸ್ ನಿಧನ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ, ಕಾಂಗ್ರೆಸ್ ಮುಖಂಡ, ಧಾರ್ಮಿಕ ಸಂಘಟನೆಗಳ ಮುಂದಾಳು ಎಸ್.ಅಬ್ಬಾಸ್ (69) ಅಲ್ಪಕಾಲದ ಅನಾರೋಗ್ಯದಿಂದ ಸೋಮವಾರ ಸಂಜೆ ನಿಧನರಾಗಿದ್ದಾರೆ.

ಜಾಹೀರಾತು

ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ಅಬ್ಬಾಸ್ ಅವರು ಜಿಲ್ಲಾ ಪಂಚಾಯತ್ ಸದಸ್ಯರಾಗಿ, ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ, ಮಂಡಲ ಪಂಚಾಯತ್ ಅಧ್ಯಕ್ಷರಾಗಿ, ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಧಾರ್ಮಿಕ ಕ್ಷೇತ್ರದಲ್ಲೂ ಸಕ್ರಿಯವಾಗಿದ್ದ ಅವರು ವಿವಿಧ ಧಾರ್ಮಿಕ ಸಂಘಟನೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಸಜಿಪನಡು ಕೇಂದ್ರ ಜುಮಾ ಮಸೀದಿ ಅಧ್ಯಕ್ಷರಾಗಿ ಹಲವಾರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್, ದ.ಕ. ಜಿಲ್ಲಾ ಮದ್ರಸ ಮ್ಯಾನೇಜ್ ಮೆಂಟ್ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸಾಮಾಜಿಕವಾಗಿಯೂ ಗುರುತಿಸಿಕೊಂಡಿದ್ದ ಅಬ್ಬಾಸ್ ಅವರು ಸರ್ವ ಧರ್ಮಗಳ ಜನರೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿದ್ದರು. ಅವರು ಪತ್ನಿ, ಇಬ್ಬರು ಪುತ್ರರು, ಮೂವರು ಪುತ್ರಿಯರ ಸಹಿತ ಅಪಾರ ಬಂಧು, ಬಳಗವನ್ನು ಅಗಲಿದ್ದಾರೆ. ಎಸ್.ಅಬ್ಬಾಸ್ ಅವರ ನಿಧನಕ್ಕೆ‌ ಮಾಜಿ ಸಚಿವರಾದ ಬಿ.ರಮಾನಾಥ ರೈ, ಯು.ಟಿ.ಖಾದರ್ ಮೊದಲಾದವರು ಸಂತಾಪ ಸೂಚಿಸಿದ್ದಾರೆ.

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

21 minutes ago