ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 127 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಮನೆಗೆ ಮರಳಿದರೆ, ಹೊಸದಾಗಿ 149 ಮಂದಿ ಕೊರೊನಾ ಪಾಸಿಟಿವ್ ದೃಢಪಟ್ಟು ಆಸ್ಪತ್ರೆಗಳಿಗೆ ಸೇರ್ಪಡೆ ಹೊಂದಿದ್ದಾರೆ. ಈವರೆಗೆ ಕೊರೊನಾ ಪಾಸಿಟಿವ್ ಹೊಂದಿದವರ ಸಂಖ್ಯೆ 3834 ಆಗಿದೆ. ಒಟ್ಟು 29,665 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷೆ ಮಾಡಲಾಗಿದೆ. 5 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ 2070 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ದಕ ಜಿಲ್ಲಾಧಿಕಾರಿ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈಗಾಗಲೇ ಜಾರಿಯಲ್ಲಿರುವ ಲಾಕ್ ಡೌನ್ ನಾಳೆಯವರೆಗೆ ಮುಂದುವರಿಯಲಿದ್ದು, ಜುಲೈ 23ರಿಂದ ಲಾಕ್ ಡೌನ್ ತೆರವುಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅತಿ ಹೆಚ್ಚು ಸೋಂಕು ಇದ್ದ ಕ್ಲಸ್ಟರ್ ಸರ್ವೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುತಿಸಲಾಗಿರುವ ಅತಿ ಹೆಚ್ಚು ಸೋಂಕು ದೃಢಪಟ್ಟಿರುವ ಕ್ಲಸ್ಟರ್ ಗಳಲ್ಲಿ ತಾಲೂಕು ವೈದ್ಯಾಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತರಿಂದ Intensive vulunerable people Identification ಸರ್ವೆ ಮಾಡಲಾಗುತ್ತದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಕೋರಲಾಗಿದೆ.
Be the first to comment on "COVID UPDATE: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 149 ಮಂದಿಗೆ ಕೊರೊನಾ ಸೋಂಕು ದೃಢ, 127 ಮಂದಿ ಡಿಸ್ಚಾರ್ಜ್, ನಾಳೆಯವರೆಗೆ ಲಾಕ್ ಡೌನ್ ಮುಂದುವರಿಕೆ"