ಬಾಳ್ತಿಲ ಗ್ರಾಮದ ಸುಧೆಕ್ಕಾರ್ ಎಂಬಲ್ಲಿರುವ ಸುಮಾರು 7 ಎಕ್ರೆ ಭೂಮಿಯಲ್ಲಿ ಭತ್ತದ ಕೃಷಿ ಕಾರ್ಯವನ್ನು ನಡೆಸಲಾಗಿದ್ದು, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಚಾಲನೆ ನೀಡಿದರು.
ಪ್ರತಿ ವರ್ಷ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ ವಿದ್ಯಾರ್ಥಿಗಳು ಭತ್ತದ ಕೃಷಿ ಕಾರ್ಯ ನಡೆಸಿಕೊಂಡು ಬರುತ್ತಿದ್ದು, ಈ ವರ್ಷ ಲಾಕ್ ಡೌನ್ ಹಿನ್ನೆಲೆಯಲ್ಲಿ ಶಾಲಾರಂಭವಾಗದ ಕಾರಣ ವಿದ್ಯಾಕೇಂದ್ರದ ಆಡಳಿತ ಮಂಡಳಿ ಸದಸ್ಯರು, ಅಭಿವೃದ್ದಿ ಸಮಿತಿ ಸದಸ್ಯರು, ಮಾತೃಭಾರತಿ ಸದಸ್ಯರು, ಹಿರಿಯ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಊರಿನವರ ಸಹಕಾರದಿಂದ ಕೃಷಿ ಕಾರ್ಯ ನಡೆಸಲಾಯಿತು. ಡಾ. ಪ್ರಭಾಕರ ಭಟ್ ಕಲ್ಲಡ್ಕ ನೇಜಿ ತೆಗೆಯುವ ಮೂಲಕ ಕೃಷಿ ಕಾರ್ಯ ಚಾಲನೆ ನೀಡಿದರು. ಈ ಸಂದರ್ಭ ವಿದ್ಯಾಕೇಂದ್ರದ ಸಂಚಾಲಕ ವಸಂತ ಮಾಧವ, ಸಹಸಂಚಾಲಕರಾದ ರಮೇಶ್ ಎನ್, ಕೋಶಾಧಿಕಾರಿ ಸತೀಶ್ ಭಟ್ ಶಿವಗಿರಿ ಹಾಗೂ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ವಿದ್ಯಾಲಯದ ಮುಖ್ಯಸ್ಥರು ಉಪಸ್ಥಿತರಿದ್ದರು.