ಪ್ರಮುಖ ಸುದ್ದಿಗಳು

ಮಂಗಳೂರು ತಲುಪಿದ ಕೆಸಿಎಫ್ ಒಮಾನ್ ಚಾರ್ಟಡ್ ಪ್ಲೈಟ್

ಜಾಹೀರಾತು

ಕೋವಿಡ್-19 ಕೊರೋನ ವೈರಸ್ ಹಿನ್ನಲೆ ವಿಮಾನಗಳು ರದ್ದಾಗಿ, ಹಲವಾರು ಕನ್ನಡಿಗರು ಊರಿಗೆ ತೆರಳಲು, ಕೆಲಸವಿಲ್ಲದೆ ಸಂಕಷ್ಟಪಡುತ್ತಿರುವುದನ್ನು ಕಂಡು ಕೆಸಿಎಫ್ ಒಮಾನ್ ಆಯೋಜಕತ್ವದಲ್ಲಿ ಇಂಡಿಗೋ ವಿಮಾನವು ಇಂದು ಮಧ್ಯಾಹ್ನ ಮಂಗಳೂರಿಗೆ ತಲುಪಿತು.

ಕರ್ನಾಟಕ ಕಲ್ಚರಲ್ ಫೌಂಡೇಶನ್ ವತಿಯಿಂದ ಆಯೋಜಿಸಿದ ಚಾರ್ಟಡ್ ವಿಮಾನದಲ್ಲಿ ಅನಾರೋಗ್ಯಕ್ಕೊಳಗಾದವರು, ಗರ್ಭಿಣಿಯರು, ಸಣ್ಣಮಕ್ಕಳು, ವೀಸಾ ಕಾಲಾವದಿ ಮುಗಿದವರು, ಉದ್ಯೋಗ ಕಳೆದು ಕೊಂಡವರು ಇತ್ಯಾದಿ, ವಿಭಿನ್ನ ರೀತಿಯ ಸಂತ್ರಸ್ತರನ್ನೊಳಗೊಂಡ ಪ್ರಯಾಣಿಕರು ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದರು.

ಜಾಹೀರಾತು

ಯಾತ್ರೆಯ ನೊಂದಾವಣಿಯಿಂದ ಪ್ರಾರಂಭಿಸಿ, ಅಗತ್ಯ ದಾಖಲೆಗಳು ಮತ್ತು ಪಾಲಿಸ ಬೇಕಾದ ಆರೋಗ್ಯ ಸಂಬಂಧಿತ ಸಂಪೂರ್ಣ ಮಾಹಿತಿಯನ್ನು, ಕೆಸಿಎಫ್ ಪ್ರತೀ ಪ್ರಯಾಣಿಕರಿಗೆ ನೀಡಿತ್ತು. ಪ್ರಯಾಣದ ಸಂದರ್ಭದಲ್ಲಿ ಧರಿಸಬೇಕಾದ ಸಂಪೂರ್ಣ ಸುರಕ್ಷಾ ಕವಚ (PPE kit) ಮತ್ತು ಲಘು ಉಪಹಾರವು ಸಂಘಟನೆಯ ವತಿಯಿಂದ ನೀಡಲಾಗಿತ್ತು.

ಜಾಹೀರಾತು

ತನ್ನ ಪ್ರಯಾಣಿಕರ ಸುರಕ್ಷೆ ಮತ್ತು ಉತ್ತಮ ಸೇವೆಯ ಉದ್ದೇಶವನ್ನಿಟ್ಟುಕೊಂಡು ಪ್ರತೀಯೋರ್ವರೊಂದಿಗೆ ಸಂಘಟನೆಯ ಕಾರ್ಯಕರ್ತರು ನಿರಂತರ ಸಂಪರ್ಕದಲ್ಲಿದ್ದು, ಕ್ವಾರಂಟೈನ್ ಮುಗಿಸಿ ಮನೆ ಸೇರುವ ವರೆಗೂ ಈ ಪ್ರಕ್ರಿಯೆ ಮುಂದುವರಿಯಲಿದೆ. ಕೆಸಿಎಫ್ ಆಯೋಜಿಸಿದ ಚಾರ್ಟರ್ ವಿಮಾನದ ಯಶಸ್ವಿಯಲ್ಲಿ, ಇಂಡಿಯನ್ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕರ್ ಮುಸ್ಲಿಯಾರ್, ಕೇಂದ್ರ ಮತ್ತು ರಾಜ್ಯ ಸರಕಾರಗಳ ಮತ್ತು ಒಮಾನ್ ಭಾರತೀಯ ರಾಯಭಾರ ಕಚೇರಿಯ ಸಹಕಾರವನ್ನು ನೆನಪಿಸಿಕೊಳ್ಳುತ್ತಾ, ಅಗತ್ಯವಿರುವ ಸರ್ಕಾರೀ ಅನುಮತಿಯನ್ನು ಪಡೆಯುವಲ್ಲಿ ಸಹಕರಿಸಿದ, ಕರ್ನಾಟಕ ರಾಜ್ಯ, ಮಂಗಳೂರು ಜಿಲ್ಲಾಧಿಕಾರಿ, ಕರ್ನಾಟಕ ಮುಸ್ಲಿಂ ಜಮಾ ಅತ್, KCF INC ನೇತಾರರು ಹಾಗೂ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದೆ.

ಮಳೆಯನ್ನೂ ಲೆಕ್ಕಿಸದೆ, ಲಗೇಜುಗಳನ್ನು ಸ್ವತಃ ಹೆಗಲಮೇಲೇರಿಸಿ, ಹೋಟೆಲ್ ಗಳಿಗೆ ಸಾಗಿಸುವುದರಿಂದ ಹಿಡಿದು ಕ್ವಾರಂಟೈನ್ ಸಮಯದುದ್ದಕ್ಕೂ ಪ್ರಯಾಣಿಕರ ಎಲ್ಲಾ ಅಗತ್ಯತೆಗಳನ್ನು ಕೇಳಿ ತಿಳಿದುಕೊಂಡು ಸೇವಾ ನಿರತರಾಗಿರುವ SSF ಕಾರ್ಯಕರ್ತರನ್ನು ಕೆಸಿಎಫ್ ನೇತಾರರು ಮತ್ತು ಪ್ರಯಾಣಿಕರು ಪ್ರಶಂಸಿಸಿದರು. ಅವಿಶ್ರಾಂತ ಕಾರ್ಯಾಚರಣೆ ಮೂಲಕ ಈ ಧ್ಯೇಯವನ್ನು ಸಾಧಿಸುವಲ್ಲಿ ದುಡಿದ ಸಂಘಟನೆಯ ಎಲ್ಲಾ ಕಾರ್ಯಕರ್ತರಿಗೆ ಮತ್ತು ವಿಮಾನವು ಮಂಗಳೂರಿಗೆ ತಲುಪಿದೊಡನೆ ಪ್ರಯಾಣಿಕರ ಎಲ್ಲ ರೀತಿಯ ಸೇವೆಗಳ ಉಸ್ತುವಾರಿ ವಹಿಸಿಕೊಂಡು ಸದಾ ಕಾರ್ಯನಿರತರಾಗಿರುವ ರಾಜ್ಯ SYS ಮತ್ತು ಕರ್ನಾಟಕ ಮುಸ್ಲಿಂ ಜಮಾಅತ್ ಗಳ ಎಲ್ಲಾ ನಾಯಕರಿಗೆ ಕೆಸಿಎಫ್ ಒಮಾನ್ ಮನತುಂಬಿ ಅಭಿನಂದನೆ ಸಲ್ಲಿಸುತ್ತಿದೆ ಎಂದು KCF ಒಮಾನ್ ನಾಯಕರು ತಿಳಿಸಿರುತ್ತಾರೆ

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ