ಬಂಟ್ವಾಳ ತಾಲೂಕು ಸಹಿತ ದ.ಕ. ಜಿಲ್ಲೆಯಾದ್ಯಂತ ನಾಗರಪಂಚಮಿಯನ್ನು ಸರಳವಾಗಿ ಆಚರಿಸಲಾಯಿತು. ದೇವಸ್ಥಾನಗಳಲ್ಲಿ ಪ್ರತಿ ವರ್ಷ ನಾಗರಪಂಚಮಿಯಂದು ಭಕ್ತರು ಕಂಡುಬರುತ್ತಿದ್ದರೆ, ಈ ವರ್ಷ ಭಕ್ತರು ಮನೆಯಲ್ಲೇ ನಾಗದೇವರಿಗೆ ಪ್ರಾರ್ಥನೆ ಸಲ್ಲಿಸಿದರು. ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಿ ಸನ್ನಿಧಿ ಸಹಿತ ಹಲವೆಡೆ ಪೂಜೆಗಳು ನಡೆದವು. ಕೆಲವು ಕುಟುಂಬದವರು ಒಟ್ಟಾಗಿ ಮನೆಯ ನಾಗನಕಟ್ಟೆಯಲ್ಲಿ ಪೂಜೆ ಸಲ್ಲಿಸಿದರು. ಹಾಗೆಯೇ ಸುಬ್ರಹ್ಮಣ್ಯ, ನಾಗ ಸನ್ನಿಧಿ ಕ್ಷೇತ್ರಗಳಲ್ಲಿ ಭಕ್ತರಿಗೆ ಕೋವಿಡ್ ಹಿನ್ನೆಲೆಯಲ್ಲಿ ಪ್ರವೇಶವಿರದೆ, ಸರಳವಾಗಿ ನಾಗರಪಂಚಮಿ ಹಬ್ಬವನ್ನು ಆಚರಿಸಲಾಯಿತು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ದೇವಸ್ಥಾನಗಳಲ್ಲಿ ನಾಗರಪಂಚಮಿ ಸರಳ ಆಚರಣೆ: ಭಕ್ತರಿಂದ ಮನೆಯಲ್ಲೇ ಪ್ರಾರ್ಥನೆ"