ಜಿಲ್ಲಾ ಸುದ್ದಿ

ದೇವಸ್ಥಾನಗಳಲ್ಲಿ ನಾಗರಪಂಚಮಿ ಸರಳ ಆಚರಣೆ: ಭಕ್ತರಿಂದ ಮನೆಯಲ್ಲೇ ಪ್ರಾರ್ಥನೆ

ಬಂಟ್ವಾಳ ತಾಲೂಕು ಸಹಿತ ದ.ಕ. ಜಿಲ್ಲೆಯಾದ್ಯಂತ ನಾಗರಪಂಚಮಿಯನ್ನು ಸರಳವಾಗಿ ಆಚರಿಸಲಾಯಿತು. ದೇವಸ್ಥಾನಗಳಲ್ಲಿ ಪ್ರತಿ ವರ್ಷ ನಾಗರಪಂಚಮಿಯಂದು ಭಕ್ತರು ಕಂಡುಬರುತ್ತಿದ್ದರೆ, ಈ ವರ್ಷ ಭಕ್ತರು ಮನೆಯಲ್ಲೇ ನಾಗದೇವರಿಗೆ ಪ್ರಾರ್ಥನೆ ಸಲ್ಲಿಸಿದರು. ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಿ ಸನ್ನಿಧಿ ಸಹಿತ ಹಲವೆಡೆ ಪೂಜೆಗಳು ನಡೆದವು. ಕೆಲವು ಕುಟುಂಬದವರು ಒಟ್ಟಾಗಿ ಮನೆಯ ನಾಗನಕಟ್ಟೆಯಲ್ಲಿ ಪೂಜೆ ಸಲ್ಲಿಸಿದರು. ಹಾಗೆಯೇ ಸುಬ್ರಹ್ಮಣ್ಯ, ನಾಗ ಸನ್ನಿಧಿ ಕ್ಷೇತ್ರಗಳಲ್ಲಿ ಭಕ್ತರಿಗೆ ಕೋವಿಡ್ ಹಿನ್ನೆಲೆಯಲ್ಲಿ ಪ್ರವೇಶವಿರದೆ, ಸರಳವಾಗಿ ನಾಗರಪಂಚಮಿ‌ ಹಬ್ಬವನ್ನು ಆಚರಿಸಲಾಯಿತು.

ಜಾಹೀರಾತು

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts