ಬಂಟ್ವಾಳ

ವಧಾ ಕೇಂದ್ರಕ್ಕೆ ಕೋಣ ಸಾಗಾಟ ಪತ್ತೆ

ಅಕ್ರಮವಾಗಿ ಟೆಂಪೋವೊಂದರಲ್ಲಿ ಕೋಣ ಸಾಗಾಟಮಾಡುತ್ತಿರುವುದನ್ನು ಬಂಟ್ವಾಳನಗರ ಪೊಲೀಸರು ಸೋಮವಾರ ಮುಂಜಾನೆ ಬಿ.ಸಿ.ರೋಡ್ ನ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ಬಳಿ ಪತ್ತೆ ಹಚ್ಚಿದ್ದಾರೆ. ಈ ಸಂದರ್ಭ ಟೆಂಪೋ ಚಾಲಕ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.  ರಾತ್ರಿಗಸ್ತಿನಲ್ಲಿದ್ದ ಬಂಟ್ವಾಳ ನಗರ ಪೊಲೀಸರು ಕೆಎಸ್ ಆರ್ ಟಿಸಿ ಬಸ್ ತಂಗುದಾಣದ ಬಳಿ ವಾಹನ ತಪಾಸಣೆಯಲ್ಲಿ ನಿರತರಾಗಿದ್ದಾಗ  ಬೆಂಗಳೂರಿನಿಂದ ಮಂಗಳೂರಿನತ್ತ ತೆರಳುತ್ತಿದ್ದ ಟೆಂಪೊವನ್ನು ಅನುಮಾನದಿಂದ ತಡೆದು ನಿಲ್ಲಿಸಿದಾಗ ಅದರ ಚಾಲಕ ಟೆಂಪೋವನ್ನು ಮುಂದಕ್ಕೆ ಚಲಾಯಿಸಿ ಅಲ್ಲಿ ನಿಲ್ಲಿಸಿ ಪರಾರಿಯಾಗಿದ್ದಾನೆನ್ನಲಾಗಿದೆ.  ತಕ್ಷಣ  ಸ್ಥಳಕ್ಕೆ ತೆರಳಿದ ಪೊಲೀಸರು ಟೆಂಪೋದ ಹಿಂಬದಿ ತಪಾಸಣೆಗೈದಾಗ ಒಂದು ಕೋಣವನ್ನು ಹಿಂಸಾತ್ಮಕವಾಗಿ ಕಟ್ಟಿಹಾಕಿರುವುದು ಪತ್ತೆಯಾಗಿದೆ. ಬಂಟ್ವಾಳ ನಗರ ಪೊಲೀಸರು ಟೆಂಪೋಹಾಗೂ ಕೋಣವನ್ನು ಪೊಲೀಸರು ವಶಪಡಿಸಿ ಮುಂದಿನ ತನಿಖೆ ನಡೆಸುತ್ತಿದ್ದಾರೆ. ವಶಪಡಿಸಲಾದ ಸೊತ್ರುಗಳ ಮೌಲ್ಯ 4.05 ಲಕ್ಷ ರೂ.ಎಂದು ಅಂದಾಜಿಸಲಾಗಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ