ಕಲ್ಲಡ್ಕ, ಪುತ್ತೂರು, ಸುಳ್ಯದಲ್ಲಿ ಉದ್ಯೋಗ ನೈಪುಣ್ಯ ತರಬೇತಿ ಆರಂಭ

ಆತ್ಮನಿರ್ಭರ ಭಾರತ ಯೋಜನೆ ಸಾಕಾರಗೊಳಿಸಲು ಗ್ರಾಮ ವಿಕಾಸ ಸಮಿತಿಯ ಮಂಗಳೂರು ವಿಭಾಗ, ದ.ಕ.ಜಿಲ್ಲಾ ಸಹಕಾರ ಭಾರತಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಸಹಯೋಗದೊಂದಿಗೆ ಉದ್ಯೋಗ ನೈಪುಣ್ಯ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿದೆ. ಇದರ ಮೊದಲ ಹಂತದ ಕಾರ್ಯಕ್ರಮ ಸುಳ್ಯದ ಎಪಿಎಂಸಿ ಹಾಲ್, ಕಲ್ಲಡ್ಕ ಶ್ರೀರಾಮ ಮಂದಿರ ಹಾಲ್ ಮತ್ತು ಪುತ್ತೂರು ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಇಂದು ಆರಂಭಗೊಂಡಿತು.

ಮೂರು ವಾರಗಳ ಕಾಲ ಈ ತರಬೇತಿ ನಡೆಯುತ್ತಿದೆ. ಸುಳ್ಯ ಎಪಿಎಂಸಿ ಸಭಾಂಗಣದಲ್ಲಿ 5 ವಿಷಯಗಳ ತರಬೇತಿ, ಪುತ್ತೂರು ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ 4 ವಿಷಯಗಳ ತರಬೇತಿ ಮತ್ತು ಕಲ್ಲಡ್ಕ ಶ್ರೀರಾಮ ಮಂದಿರದಲ್ಲಿ 3 ವಿಷಯಗಳ ತರಬೇತಿ ನಡೆಯುತ್ತಿದೆ. ಎಲ್ಲ ಕೇಂದ್ರಗಳಲ್ಲೂ ಪ್ರತ್ಯೇಕ ವಿಷಯಗಳಲ್ಲಿ ತರಬೇತಿ ನಡೆಯುತ್ತಿದ್ದು, ಈ ವಾರ ಮೂರು ಕೇಂದ್ರಗಳಲ್ಲಿ ಒಟ್ಟು 185 ಮಂದಿ ಪಾಲ್ಗೊಳ್ಳುತ್ತಿದ್ದಾರೆ. ಪ್ರತಿದಿನ 5 ಗಂಟೆ ಕಾಲ ಒಟ್ಟು 6 ದಿನ ತರಬೇತಿ ನಡೆಯಲಿದೆ. ಒಟ್ಟು 60 ಮಂದಿ ಸಂಪನ್ಮೂಲ ವ್ಯಕ್ತಿಗಳು ಇಲ್ಲಿದ್ದಾರೆ ಎಂದು ಹೇಳಿದರು  ಆರೆಸ್ಸೆಸ್ ಮಂಗಳೂರು ವಿಭಾಗದ ಗ್ರಾಮವಿಕಾಸ ಸಂಯೋಜಕ್ ಪ್ರವೀಣ ಸರಳಾಯ.  ಹೈನುಗಾರಿಕೆ, ಕೃಷಿಯಂತ್ರೋಪಕರಣ ಬಳಕೆ ಮತ್ತು ದುರಸ್ತಿ ಹಾಗೂ ಪ್ಯಾಬ್ರಿಕೇಶನ್ ಮತ್ತು ವೆಲ್ಡಿಂಗ್  ಬಗ್ಗೆ ಕಲ್ಲಡ್ಕದಲ್ಲಿ ತರಬೇತಿ  ಕಾರ್ಯಕ್ರಮ ನಡೆಯುತ್ತಿದೆ ಎಂದು ಸಂಯೋಜಕ ವಜ್ರನಾಥ ಕಲ್ಲಡ್ಕ.

ಕಲ್ಲಡ್ಕದಲ್ಲಿ ಮಾಜಿ ಶಾಸಕ ಕೆ. ಪದ್ಮನಾಭ ಕೊಟ್ಟಾರಿ ಕಾರ್ಯಕ್ರಮವನ್ನು ಉದ್ಘಾಟಿಸಿದರು,. ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತ ಸಹಕಾರ್ಯವಾಹ ಪ್ರಕಾಶ್ ಪಿ.ಎಸ್. ಆಶಯ ಮಾತುಗಳನ್ನಾಡಿದರು, ಮುಖ್ಯ ಅತಿಥಿ ಪುತ್ತೂರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಸಂಚಾಲಕ ಮುರಳೀಧರ ಉಪಸ್ಥಿತರಿದ್ದರು. ಶ್ರೀರಾಮ ಮಂದಿರದ ಅಧ್ಯಕ್ಷ ಆರ್.ಚೆನ್ನಪ್ಪ ಕೋಟ್ಯಾನ್ ಸ್ವಾಗತಿಸಿದರು. ವಿದ್ಯಾ ಆಶಯಗೀತೆ ಹಾಡಿದರು.ಶ್ರೀರಾಮ ಸೊಸೈಟಿಯ ಉಪಾಧ್ಯಕ್ಷ ಸುಜಿತ್ ಕೊಟ್ಟಾರಿ ವಂದಿಸಿದರು. ರಾಜೇಶ್ ಕೊಟ್ಟಾರಿ ಕಾರ್ಯಕ್ರಮ ನಿರೂಪಿಸಿದರು.

 

About the Author

Harish Mambady
ಕಳೆದ 26 ವರ್ಷಗಳಿಂದ ಪತ್ರಕರ್ತನಾಗಿ ಹಲವು ದೈನಿಕಗಳಲ್ಲಿ ಮಂಗಳೂರು, ಮಣಿಪಾಲ ಮತ್ತು ಬಂಟ್ವಾಳಗಳಲ್ಲಿ ಕೆಲಸ ಮಾಡಿರುವ ಅನುಭವ ಇರುವ ಹರೀಶ ಮಾಂಬಾಡಿ, 2016ರಲ್ಲಿ www.bantwalnews.com ಆರಂಭಿಸಿದ್ದು, ಇದರ ಸಂಪಾದಕರೂ ಆಗಿದ್ದಾರೆ.

Be the first to comment on "ಕಲ್ಲಡ್ಕ, ಪುತ್ತೂರು, ಸುಳ್ಯದಲ್ಲಿ ಉದ್ಯೋಗ ನೈಪುಣ್ಯ ತರಬೇತಿ ಆರಂಭ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*