ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಬೆಂಗಳೂರಿನಲ್ಲಿ ಮುಜರಾಯಿ,ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ದ.ಕ. ಜಿಲ್ಲೆಯ ಶಾಸಕರು ಹಾಗೂ ಇಲಾಖಾಧಿಕಾರಿಗಳೊಂದಿಗೆ ದ.ಕ ಜಿಲ್ಲೆಗೆ ಸಂಬಂಧಿಸಿದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ,ಮೀನುಗಾರಿಕೆ ಇಲಾಖೆ ಮತ್ತು ಬಂದರು ಇಲಾಖೆಗಳ ವಿಷಯಗಳ ಬಗ್ಗೆ ಸಭೆಯಲ್ಲಿ ಭಾಗವಹಿಸಿ ಇಲಾಖೆಗೆ ಸಂಬಂಧಿಸಿದ ವಿಚಾರಗಳ ಕುರಿತು ಚರ್ಚಿಸಿದರು.