ಬಂಟ್ವಾಳ:ಕೊರೊನಾ ವಿಷಯದಲ್ಲಿ ಸರ್ಕಾರ ಅವೈಜ್ಞಾನಿಕ ನಿರ್ಧಾರಗಳನ್ನು ಕೈಗೊಂಡಿದ್ದು, ಇದರಿಂದ ದೇಶದ ಬಡ ಮತ್ತು ಮಧ್ಯಮ ವರ್ಗದ ಜನರು ಸಂಕಷ್ಟಕ್ಕೊಳಗಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಮಾನ ಮನಸ್ಕ ನಾಗರಿಕ ಸಂಘಟನೆಗಳಿಂದ ಆ.4ರಂದು ಬಿ.ಸಿ.ರೋಡಿನ ಮಿನಿ ವಿಧಾನಸೌಧ ಮುಂಭಾಗ ಜನಜಾಗೃತಿ ಆಂದೋಲನ ನಡೆಸಲಾಗುತ್ತದೆ ಎಂದು ಸಮಿತಿ ಅಧ್ಯಕ್ಷ ಬಿ.ಎಂ. ಪ್ರಭಾಕರ ದೈವಗುಡ್ಡೆ ಹೇಳಿದ್ದಾರೆ.
ಬಿಸಿರೋಡಿನಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಕೊರೊನಾ ಪಿಪಿಇ ಕಿಟ್ ಖರೀದಿಯಲ್ಲಿ ಆಗಿರುವ ಭ್ರಷ್ಟಾಚಾರದ ಬಗ್ಗೆ ಸೂಕ್ತ ತನಿಖೆಯಾಗಬೇಕು, ಕೊರೊನಾ ಪೀಡಿತರಿಗೆ ಕ್ವಾರಂಟೈನ್ ಮಾಡುವ ಸಂದರ್ಭ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು, ಕೊರೊನಾದಿಂದ ಮೃತಪಟ್ಟವರ ಅಂತ್ಯ ಸಂಸ್ಕಾರವನ್ನು ನಡೆಸಲು ಮೃತರ ಕುಟಂಬದವರಿಗೆ ಅವಕಾಶ ಕಲ್ಪಿಸಬೇಕು, ಲಾಕ್ ಡೌನ್ ನಿಂದ ತೊಂದರೆಗೊಳಗಾದವರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಕೊರೊನಾ ನಿರ್ವಹಣೆಯಲ್ಲಿ ಸರಕಾರ ವಿಫಲವಾಗಿರುವುದನ್ನು ಜನತೆಗೆ ತಿಳಿಸಲು ಜನಜಾಗೃತಿ ಆಂದೋಲನ ನಡೆಸಲು ಕರೆ ನೀಡಿದರು.
ಸಭೆಯಲ್ಲಿ ಸಮಿತಿ ಪ್ರಧಾನ ಕಾರ್ಯದರ್ಶಿ ಬಿ.ಶೇಖರ್, ಸಹಕಾರ್ಯದರ್ಶಿಗಳಾದ ರಾಮಣ್ಣ ವಿಟ್ಲ, ಸುರೇಶ್ ಕುಮಾರ್ ಬಂಟ್ವಾಳ್, ಸಮಿತಿಯ ಕಾನೂನು ಸಲಹೆಗಾರ ನ್ಯಾಯವಾದಿ ಎಂ.ಚಂದ್ರಶೇಖರ ಪೂಜಾರಿ, ಕೋಶಾಧಿಕಾರಿ ಸುರೇಂದ್ರ ಕೋಟ್ಯಾನ್, ಸದಸ್ಯ ರಾಜಾ ಚಂಡ್ತಿಮಾರ್ ಉಪಸ್ಥಿತರಿದ್ದರು.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…